For the best experience, open
https://m.bcsuddi.com
on your mobile browser.
Advertisement

ಈ ಭಾಗಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆ .!

08:33 AM Jul 25, 2024 IST | Bcsuddi
ಈ ಭಾಗಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆ
Advertisement

ಬೆಂಗಳೂರು: ಉತ್ತರ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಜುಲೈ 25 ರಿಂದ 28 ರ ವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 25 ಮತ್ತು 26ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 25 ರಿಂದ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜುಲೈ 25ರಂದು ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 26ರಂದು ಕಲಬುರಗಿ, ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 25ರಂದು ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಆಗಲಿದ್ದು, ಬಳಿಕ ಮಳೆಯ ಪ್ರಮಾಣ ಕ್ಷಿಣಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 25ರಂದು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಜುಲೈ 26, 27ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

Tags :
Author Image

Advertisement