ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಉಗ್ರ ಪನ್ನುನ್ ಹತ್ಯೆ ಸಂಚು ಆರೋಪಿ ನಿಖಿಲ್​ ಗುಪ್ತಾ ಕುಟುಂಬದ ಅರ್ಜಿ ತಿರಸ್ಕರಿಸಿದ ಸುಪ್ರೀಂ

12:04 PM Jan 04, 2024 IST | Bcsuddi
Advertisement

ನವದೆಹಲಿ:  ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಅಮೆರಿಕ ಅಧಿಕಾರಿಗಳಿಂದ ಆರೋಪ ಎದುರಿಸುತ್ತಿರುವ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ಅವರ ಕುಟುಂಬ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.

Advertisement

ಭಾರತ ಸರ್ಕಾರವು ಮಧ್ಯ ಪ್ರವೇಶಿಸುವಂತೆ ಹಾಗೂ ಕಾನೂನು ಸಹಾಯ ಕೋರಿ ಸುಪ್ರೀಂ ಕೋರ್ಟ್‌ಗೆ ನಿಖಿಲ್ ಗುಪ್ತಾ ಕುಟುಂಬಸ್ಥರು ಅರ್ಜಿ ಸಲ್ಲಿಸಲಾಗಿತ್ತು.

ಜೆಕ್​ ಗಣರಾಜ್ಯದ ಪ್ರೇಗ್‌ನಲ್ಲಿನ ಜೈಲಿನಲ್ಲಿರುವ ನಿಖಿಲ್ ಗುಪ್ತಾನನ್ನು ಅಮೆರಿಕಕ್ಕೆ ಗಡಿಪಾರು ಮಾಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಭಾರತ ಮಧ್ಯಪ್ರವೇಶ ಮಾಡುವಂತೆ ನಿಖಿಲ್ ಗುಪ್ತಾ ಕುಟುಂಬ ಮನವಿ ಮಾಡಿತ್ತು..ಜೆಕ್ ಅಧಿಕಾರಿಗಳೊಂದಿಗೆ ಮಧ್ಯಸ್ಥಿಕೆಗಾಗಿ ನೆರವು ನೀಡುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಗೃಹ ವ್ಯವಹಾರಗಳ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಕುಟುಂಬವು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿತ್ತು

Advertisement
Next Article