ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ- ಬ್ಯಾಂಕ್ ಮೂಲಕ ಸಾಲ ಸೌಲಭ್ಯ

11:21 AM Aug 10, 2024 IST | BC Suddi
Advertisement

ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾ ಕೇಂದ್ರದಿಂದ ಉಚಿತ ಊಟ ಮತ್ತು ವಸತಿ ಸಹಿತ 10 ದಿನದ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು ಆಯೋಜನೆ ಮಾಡಲಾಗಿದ್ದು ತರಬೇತಿ ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

1) ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.

2) ಅರ್ಜಿದಾರರಿಗೆ ಕನ್ನಡ ಬಾಷೆಯನ್ನು ಓದಲು ಮತ್ತು ಬರೆಯಲು ಬರಬೇಕು.

3) ಗ್ರಾಮೀಣ ಭಾಗದಲ್ಲಿ ವಾಸಿರುವ ಬಿ.ಪಿ.ಎಲ್ ಕಾರ್ಡ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ತರಬೇತಿ ನೀಡುವ ಸಂಸ್ಥೆಯ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

4) ಅರ್ಜಿದಾರ ಅಭ್ಯರ್ಥಿಯು ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ  ತರಬೇತಿಯು ಒಟ್ಟು 10 ದಿನ ನಡೆಯಲಿದ್ದು, ತರಬೇತಿಯಲ್ಲಿ ಬಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಶುಲ್ಕ ಕಟ್ಟುವ ಅವಶ್ಯಕತೆ ಇರುವುದಿಲ್ಲ.

 ಬ್ಯಾಂಕ್ ಮೂಲಕ ಸಾಲ ಸೌಲಭ್ಯ:

ಈ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ತರಬೇತಿಯಲ್ಲಿ ಉಚಿತವಾಗಿ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಯಾವೆಲ್ಲ ಯೋಜನೆಯಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಹಾಯಧನದಲ್ಲಿ ಸಾಲವನ್ನು ತೆಗೆದುಕೊಂಡು ಉದ್ಯಮಿಯನ್ನು ಆರಂಭಿಸಬಹುದು ಎಂದು ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಎರಡು ವಿಧಾನ ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು ಒಂದು ಆನ್ಲೈನ್ ಮೂಲಕ ಈ ಲೇಖನದ ಕೊನೆಯಲ್ಲಿ ಹಾಕಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಎಲ್ಲಾ ವಿವರ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು ಇನ್ನೊಂದು ವಿಧಾನ ಎಂದರೆ ಅಭ್ಯರ್ಥಿಗಳು ನೇರವಾಗಿ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ತರಬೇತಿ ಪ್ರಾರಂಭವಾಗುವ ದಿನ ಹಾಜರಾಗಬಹುದು ಅಥವಾ ಮುಂಚಿತವಾಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಈ ಮೊಬೈಲ್ 9449860007, 9538281989, 9916783825, 888044612 ಸಂಖ್ಯೆಗಳಿಗೆ ಸಂಪರ್ಕಿಸಿ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.

ಅರ್ಜಿದಾರರ ಅಧಾರ್ ಕಾರ್ಡ ಪ್ರತಿ.ಬ್ಯಾಂಕ್ ಪಾಸ್ ಬುಕ್.ರೇಶನ್ ಕಾರ್ಡ.ಮೊಬೈಲ್ ಸಂಖ್ಯೆ.
 ತರಬೇತಿ ನಡೆಯುವ ಅವಧಿ:

ತರಬೇತಿ ಪ್ರಾರಂಭ ದಿನಾಂಕ: 19 ಆಗಸ್ಟ್ 2024 ರಿಂದ ಪ್ರಾರಂಭವಾಗಿ 28 ಆಗಸ್ಟ್ 2024ಕ್ಕೆ ಮುಕ್ತಾಯವಾಗಲಿದೆ.

ತರಬೇತಿ ನಡೆಯುವ ಸ್ಥಳ:

ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ-581343

ಇನ್ನು ಹೆಚ್ಚಿನ ಮಾಹಿತಿಗಾಗಿ: 9449860007, 9538281989, 9916783825, 888044612

Advertisement
Next Article