ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಉದ್ಯಮಿಗೆ 5ಕೋಟಿ ವಂಚನೆ ಪ್ರಕರಣ- ಚೈತ್ರಾ ಸೇರಿ 9 ಮಂದಿ ಆರೋಪಿಗಳ ವಿರುದ್ದ ಚಾರ್ಜ್‌‌ಶೀಟ್‌

03:22 PM Nov 08, 2023 IST | Bcsuddi
Advertisement

ಬೆಂಗಳೂರು: ಟಿಕೆಟ್​ಗೆ ಆಮಿಷವೊಡ್ಡಿ ಉದ್ಯಮಿಯಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ವಂಚನೆ​ ಪ್ರಕರಣ ಸಂಬಂಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 9 ಆರೋಪಿಗಳ ವಿರುದ್ಧ ಸಿಸಿಬಿ ಅಧಿಕಾರಿಗಳು ಚಾರ್ಜ್​​ಶೀಟ್ ಸಲ್ಲಿಸಿದ್ದಾರೆ.

Advertisement

ಚೈತ್ರಾ, ಹಾಲಶ್ರೀ ಸೇರಿ 9 ಮಂದಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡು ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್​ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ ಇಟ್ಟು ಹೋಗಿದ್ದ ಬಗ್ಗೆ ಸೇರಿದಂತೆ ಸ್ಪಾಟ್ ಮಹಜರ್ ನಡೆಸಿ ಹಣ ಸೀಜ್ ಮಾಡಿದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ ಚೈತ್ರಾ ವಂಚನೆ ಪ್ರಕರಣದಲ್ಲಿ‌ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ರಿಕವರಿ ಮಾಡಲಾಗಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲಾ ಆಡಿಯೋ, ವಿಡಿಯೋವನ್ನು ಸಿಸಿಬಿ ಪೊಲೀಸರು ಪಡೆದಿದ್ದಾರೆ. ಗೋವಿಂದ ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೀವ್ ವರದಿ ಕೂಡ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಮಾಡಿ ವರದಿ ಸಲ್ಲಿಸಲಾಗಿದೆ. ಸದ್ಯ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Advertisement
Next Article