For the best experience, open
https://m.bcsuddi.com
on your mobile browser.
Advertisement

ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ.!

07:30 AM Jun 24, 2024 IST | Bcsuddi
ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ
Advertisement

ಮಡಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ಪ್ಯಾಲೇಸ್ ಟೊಯಾಟೋ, ಕುಶಾಲನಗರ, ಅಟೋಲೈವ್ ಮಲ್ಟಿನ್ಯಾಷನಲ್ ಕಂಪನಿ, ಮೈಸೂರು, ಕ್ಲಬ್ ಮಹೀಂದ್ರ, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಟೆಕ್, ಮಡಿಕೇರಿ, ಕಾವೇರಿ ಹೋಂಡಾ, ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

Advertisement

ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 8296020826 /8123312319 ಮೂಲಕ ಸಂಪರ್ಕಿಸಬಹುದು.

Tags :
Author Image

Advertisement