ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಎಕ್ಸಿಟ್‌ ಪೋಲ್‌: ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟಕ್ಕೆ ಅಧಿಕಾರದ ಗದ್ದುಗೆ

11:11 AM Oct 06, 2024 IST | BC Suddi
Advertisement

ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ನೇತೃತ್ವದ ಮೈತ್ರಿಕೂಟ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

Advertisement

ಇಂಡಿಯಾ ಒಕ್ಕೂಟ ಅಧಿಕಾರ ಹಿಡಿದರೂ ಬಿಜೆಪಿ ಕಳೆದ ಬಾರಿ ಚುನಾವಣಾ ಫಲಿತಾಂಶಕ್ಕಿಂತ ಚೇತರಿಕೆ ಕಂಡಿದೆ ಎಂದು ಹೇಳಲಾಗುತ್ತಿದೆ. 2014ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಜಯಗಳಿಸಿತ್ತು. ಕಾಂಗ್ರೆಸ್‌ 12 ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿತ್ತು. ಮೆಹಬುಬಾ ಮುಫ್ತಿ ನೇತೃತ್ವದ ಪಿಡಿಪಿ 28 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆಜ್‌ ತಕ್‌ ಸಿ ವೋಟರ್‌ ಸಮೀಕ್ಷೆಯಲ್ಲಿ ಬಿಜೆಪಿಗೆ ಮುನ್ನಡೆ ಬಂದಿದೆ. ಉಳಿದೆಲ್ಲ ಸಮೀಕ್ಷೆಗಳು ಕಾಂಗ್ರೆಸ್‌-ಎನ್‌ಸಿ ಮೈತ್ರಿ ಕೂಟಕ್ಕೆ ಮುನ್ನಡೆ ತೋರಿಸಿವೆ.

ಪ್ರತ್ಯೇಕ ರಾಜ್ಯ ಸ್ಥಾನಮಾನ ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) 90 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಇದೇ ಅಕ್ಟೋಬರ್‌ 8ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಸಿ ವೋಟರ್ -ಆಜ್ ತಕ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಎನ್‌ಸಿ – 11-15, ಬಿಜೆಪಿ – 27-31, ಪಿಡಿಪಿ – 02 , ಇತರೆ – 01. ದೈನಿಕ್‌ ಬಾಸ್ಕರ್‌ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ ಎನ್‌ಸಿ – 35-40, ಬಿಜೆಪಿ – 20-25, ಪಿಡಿಪಿ – 4-7, ಇತರೆ – 12-16

ಪೀಪಲ್‌ ಪ್ಲಸ್‌ ಸಮೀಕ್ಷೆ ಪ್ರಕಾರ ಕಾಂಗ್ರೆಸ್ - ಎನ್‌ಸಿ – 40-48, ಬಿಜೆಪಿ – 27-32, ಪಿಡಿಪಿ – 7-11, ಇತರೆ – 4-6. ಇಂಡಿಯಾ ಟುಡೆ- ಸಿ ವೋಟರ್‌ ಕಾಂಗ್ರೆಸ್ ಎನ್‌ಸಿ – 40-48, ಬಿಜೆಪಿ – 27-32, ಪಿಡಿಪಿ – 6-12, ಇತರೆ – 6-11

 

Advertisement
Next Article