ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಾರ ಕೊಯಮತ್ತೂರಿನಲ್ಲಿ ಅಣ್ಣಾಮಲೈಗೆ ಸೋಲು

11:47 AM Jun 02, 2024 IST | Bcsuddi
Advertisement

ಚೆನ್ನೈ: ಲೋಕಸಭಾ ಚುನಾವಣೆಯ ಎಲ್ಲಾ ಹಂತದ ಮತದಾನ ಮುಗಿದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದೆ. ಈ ಸಮೀಕ್ಷೆಯ ಪ್ರಕಾರ ಕೊಯಮತ್ತೂರಿನಲ್ಲಿ ಅಣ್ಣಾಮಲೈಗೆ ಸೋಲಾಗಲಿದೆ ಎಂದು ಹೇಳಲಾಗುತ್ತಿದೆ.

Advertisement

ತಮಿಳುನಾಡಿನ ಎರಡನೇ ಅತಿದೊಡ್ಡ ನಗರವಾದ ಕೊಯಮತ್ತೂರಿನಲ್ಲಿ ಬಿಜೆಪಿಯ ಫೈರ್‌ಬ್ರಾಂಡ್ ನಾಯಕ ಮತ್ತು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ಹಾಗೂ ನಗರ ಮೇಯರ್ ಮತ್ತು ಡಿಎಂಕೆ ಅಭ್ಯರ್ಥಿ ಪಿ ಗಣಪತಿ ರಾಜ್‌ಕುಮಾರ್ ಮತ್ತು ಎಐಎಡಿಎಂಕೆ ನ ಸಿಂಗೈ ಜಿ ರಾಮಚಂದ್ರನ್ ಕಣಕ್ಕಿಳಿದಿದ್ದಾರೆ. ಈ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯು ಬಲಿಷ್ಠರ ಘರ್ಷಣೆಗೆ ಸಾಕ್ಷಿಯಾಗಿದೆ.

ಇನ್ನು ನಿನ್ನೆ ಪ್ರಕಟವಾದ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಬ್ಲಾಕ್ ಕೊಯಮತ್ತೂರಿನಲ್ಲಿ ಗೆಲ್ಲಲಿದೆ. ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಭ್ಯರ್ಥಿ ಪಿ ಗಣಪತಿ ರಾಜ್‌ಕುಮಾರ್ ಅವರು ಕೊಯಮತ್ತೂರು ಲೋಕಸಭಾ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದೆ.

ಇನ್ನು ಎಕ್ಸಿಟ್ ಪೋಲ್ ಫಲಿತಾಂಶವನ್ನು ತಳ್ಳಿಹಾಕಿರುವ ಅಣ್ಣಾಮಲೈ ಅವರು, ಜೂನ್ 4 ರಂದು ನಿಮಗೆ ಆಹ್ಲಾದಕರ ಆಶ್ಚರ್ಯವನ್ನು ನೀಡಲು ನಾವು ಇಷ್ಟಪಡುತ್ತೇವೆ. ನಾವು ಆರಾಮವಾಗಿ ಗೆಲ್ಲುತ್ತೇವೆ. ಮೋದಿ ಜಿ ದೊಡ್ಡ ಜನಾದೇಶದೊಂದಿಗೆ ಹಿಂತಿರುಗುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನು ನಿನ್ನೆ ಪ್ರಕಟವಾದ ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎಗೆ ದೇಶದಲ್ಲಿ ಬಹುಮತ ಬರಲಿದೆ. ದಕ್ಷಿಣದ ರಾಜ್ಯಗಳಾದ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರಯಲಿದೆ ಎಂದು ಸಮೀಕ್ಷೆಗಳು ಹೇಳಿವೆ.

Advertisement
Next Article