ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಎಕ್ಸ್‌ಪ್ರೆಸ್‌ ವೇನಲ್ಲಿ ಹುಚ್ಚಾಟ -ಚಾಲಕರು ಅರೆಸ್ಟ್..!

02:43 PM Aug 29, 2024 IST | BC Suddi
Advertisement

ಮಂಡ್ಯ :ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರ ಅತಿಥಿಗಳಾಗಿದ್ದಾರೆ.

Advertisement

ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪರಿಣಾಮ, ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಿಜಿಪಿ ಅಲೋಕ್ ಕುಮಾರ್ ರನ್ನು ಟ್ಯಾಗ್ ಮಾಡಿ ತನ್ನ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಪೋಲೀಸರು ಕಾರ್ಯಾಚರಣೆ ನಡೆಸಿ ಚಾಲಕ ಪ್ರಶಾಂತ್ ಹಾಗೂ ಸಹ ಚಾಲಕ ನೀಲಪ್ಪನನ್ನು ಬಂಧಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಆರೋಪದಡಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 

Advertisement
Next Article