ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಎಲ್ಲಾ ತಾಲ್ಲೂಕುಗಳಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿ.!

07:44 AM Oct 06, 2024 IST | BC Suddi
Advertisement

 

Advertisement

 

ಚಿಕ್ಕಬಳ್ಳಾಪುರ: ಹೌದು ಎಲ್ಲ ತಾಲೂಕುಗಳ ಆಸ್ಪತ್ರೆಗಳಿಗೆ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯಡಿ ಹೃದಯಾಘಾತದ ಸಂದರ್ಭದಲ್ಲಿ 25,000 ರೂ. ಮೌಲ್ಯದ ಜೀವರಕ್ಷಕ ಇಂಜೆಕ್ಷನ್ ಉಚಿತವಾಗಿ ನೀಡಲಾಗುತ್ತಿದೆ. 1 ಮತ್ತು 2 ನೇ ಹಂತದಲ್ಲಿ 15 ಜಿಲ್ಲೆಗಳ 70 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಯಾಗಿದ್ದು, 3 ಮತ್ತು 4 ನೇ ಹಂತದಲ್ಲಿ ಉಳಿದ 16 ಜಿಲ್ಲೆಗಳ ಎಲ್ಲಾ ತಾಲೂಕುಗಳಲ್ಲಿ ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಈವರೆಗೆ 1.81 ಲಕ್ಷ ಮಂದಿಗೆ ಇಸಿಜಿ ಮೂಲಕ ಪರೀಕ್ಷೆ ಮಾಡಲಾಗಿದೆ. 2 ಲಕ್ಷ ಹೃದಯ ಸಂಬಂಧಿ ರೋಗ ಲಕ್ಷಣವುಳ್ಳವರ ತಪಾಸಣೆ ನಡೆಸಲಾಗಿದೆ. 11,606 ಗಂಭೀರ ಪ್ರಕರಣಗಳು ಪತ್ತೆಯಾಗಿದ್ದು, 3,218 ರೋಗಿಗಳಿಗೆ ಹಬ್ ಆಸ್ಪತ್ರೆಗಳಿಗೆ ಚಿಕಿತ್ಸೆ ಶಿಫಾರಸು ಮಾಡಲಾಗಿದೆ ಎಂದರು.

Tags :
ಎಲ್ಲಾ ತಾಲ್ಲೂಕುಗಳಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿ.!
Advertisement
Next Article