ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ ಹೀಗಿದೆ

09:29 AM May 12, 2024 IST | Bcsuddi
Advertisement

ಬೆಂಗಳೂರು: ಈಗಾಗಲೇ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಮೇ 09ರಂದು ಪ್ರಕಟವಾಗಿದ್ದು, ಇದರ ಬೆನ್ನಲ್ಲೇ ಇದೀಗ ಅನುತ್ತೀರ್ಣರಾದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಹಾಗಾದರೆ ಯಾವ್ಯಾವಾಗ ಯಾವ ವಿಷಯಗಳ ಪರೀಕ್ಷೆಗಳು ಇರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

Advertisement

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಮಾಡಿಕೊಟ್ಟಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ದಿನಾಂಕವನ್ನು ಪ್ರಕಟಿಸಲಾಗಿದ್ದು, ಜೂನ್‌ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯದ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ ಎಂದು ತಿಳಿಸಿದೆ.

SSLC ಪರೀಕ್ಷೆ-2ರ ವೇಳಾಪಟ್ಟಿ ವಿವರ

  • ಜೂನ್‌ 7-2024: ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಇಂಗ್ಲೀಷ್‌ (ಎಸ್‌ಸಿಇಆರ್‌ಟಿ), ಸಂಸ್ಕೃತ
  • ಜೂನ್‌ 8, 2024: ತೃತೀಯ ಭಾಷೆ-ಹಿಂದಿ ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಉರ್ದು, ತೆಲುಗು, ಪರ್ಷಿಯನ್‌, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್‌
  • ಜೂನ್‌ 10, 2024: ಗಣಿತ, ಸಮಾಜ ಶಾಸ್ತ್ರ
  • ಜೂನ್‌ 11, 2024: ಅರ್ಥ ಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌
  • ಜೂನ್‌-12, 2024- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
  • ಜೂನ್‌ 13, 2024-ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)
  • ಜೂನ್‌ 14, 2024-ಸಮಾಜ ವಿಜ್ಞಾನ
Advertisement
Next Article