ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಎಸ್​ಸಿಒ ಶೃಂಗಸಭೆಗೆ ಪ್ರಧಾನಿ ಮೋದಿಯನ್ನು ಆಹ್ವಾನಿಸಿದ ಪಾಕ್

10:23 AM Aug 25, 2024 IST | BC Suddi
Advertisement

ನವದೆಹಲಿ:ಆಕ್ಟೋಬರ್​ನಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಎಸ್​ಸಿಒ, ಸಿಎಚ್​ಜಿ ಶೃಂಗಸಭೆಗೆ ಸಭೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ ನೀಡಲಾಗಿದೆ.

Advertisement

ಅಕ್ಟೋಬರ್ 15-16 ರಂದು ಯುರೇಷಿಯನ್ ಗುಂಪಿನ ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ ನಂತರ ಎರಡನೇ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ SCO ಶೃಂಗಸಭೆಯನ್ನು ಪಾಕಿಸ್ತಾನ ಈ ವರ್ಷ ಆಯೋಜಿಸುತ್ತಿದೆ.

ಅಕ್ಟೋಬರ್ 15-16ರಂದು ನಡೆಯಲಿರುವ ಸಭೆಯಲ್ಲಿ ಪಾಕಿಸ್ತಾನವು ಆತಿಥ್ಯವಹಿಸಲಿದೆ ಎಂದು ವರದಿಯಾಗಿದೆ.ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿ ಅವರು ಅಂದಿನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಉತ್ತಮ ಬಾಂಧವ್ಯ ಆರಂಭಿಸಿದ್ದರು.

ಕಳೆದ ವರ್ಷ ಬಿಷ್ಕೆಕ್‌ನಲ್ಲಿ ನಡೆದ ಸಿಎಚ್‌ಜಿ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗವಹಿಸಿದ್ದರು. ಆದರೆ, ಈ ಬಾರಿ ಯಾವುದೇ ಭಾರತೀಯ ಸಚಿವರಿಗೆ ಪಾಕಿಸ್ತಾನದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುತ್ತಾರೆಯೋ ಇಲ್ಲವೋ ಎಂಬುದು ಇನ್ನೂ ಅಸ್ಪಷ್ಟ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

 

Advertisement
Next Article