ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಐಎನ್‌ಎಲ್‌ ಡಿ ನಾಯಕ ರಾಠಿ ಹತ್ಯೆ: 2 ಶೂಟರ್ಗಳ ಬಂಧನ, ಉಳಿದವರಿಗಾಗಿ ಶೋಧ

11:46 AM Mar 04, 2024 IST | Bcsuddi
Advertisement

ನವದೆಹಲಿ: ಹರ್ಯಾಣ ಇಂಡಿಯನ್ ನ್ಯಾಷನಲ್ ಲೋಕದಳ ಮುಖ್ಯಸ್ಥ, ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರ ಹತ್ಯೆಗೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಮತ್ತು ದೆಹಲಿ ಪೊಲೀಸರ ವಿಶೇಷ ದಳ ಜಂಟಿ ಕಾರ್ಯಾಚರಣೆ ನಡೆಸಿ ಗೋವಾದಲ್ಲಿ ಇಬ್ಬರು ಶೂಟರ್ಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Advertisement

ಬಂಧಿತರನ್ನು ಸೌರಭ್ ಮತ್ತು ಆಶಿಶ್ ಎಂದು ಗುರುತಿಸಲಾಗಿದ್ದು, ಇಬ್ಬರು ಶೂಟರ್ಗಳು ಕಪಿಲ್ ಸಾಂಗ್ವಾನ್ ಗ್ಯಾಂಗ್ನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಶಂಕಿಸಲಾಗಿದೆ.

ಫೆಬ್ರವರಿ 25 ರಂದು, ಹರಿಯಾಣದ ಜಜ್ಜರ್ ಜಿಲ್ಲೆಯ ರೈಲ್ವೇ ಕ್ರಾಸಿಂಗ್ ಬಳಿ ರಾಠಿಯನ್ನು ಕರೆದೊಯ್ಯುತ್ತಿದ್ದ ಕಾರು ನಿಂತದ್ದ ವೇಳೆ ಐ20 ಕಾರಿನಲ್ಲಿ ಹೊಂಚು ಹಾಕಿ ಕುಳಿತ್ತಿದ್ದ ಅಪರಿಚಿತರ ತಂಡ ಎಸ್ಯುವಿ ಕಾರಿನ ಮೇಲೆ ಗುಂಡುಗಳ ಸುರಿಮಳೆಯನ್ನು ಸುರಿಸಿದ್ದಾರೆ. ಘಟನೆಯಲ್ಲಿ ನಫೆ ಸಿಂಗ್ ರಾಠಿ ಮತ್ತು ಅವರ ಸಹಾಯಕ ಸಾವನ್ನಪ್ಪಿದರು. ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಈ ಬಗ್ಗೆ ಮಾಹಿತಿ ನೀಡಿದ ಜಜ್ಜರ್ ಪೊಲೀಸ್ ವರಿಷ್ಠಾಧಿಕಾರಿ ಅರ್ಪಿತ್ ಜೈನ್ ಅವರು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಿ ದಾಳಿಕೋರರ ಪತ್ತೆಗೆ ಪೊಲೀಸರು ಬಲೆ ಬಿಸಿದ್ದು ಅದರಂತೆ ಇಬ್ಬರು ದಾಳಿಕೋರರನ್ನು ಗೋವಾದಲ್ಲಿ ಬಂಧಿಸಿಲಗಿದೆ. ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ದಾಳಿಕೋರರು ಬಳಸಿದ್ದ ಕಾರನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Advertisement
Next Article