For the best experience, open
https://m.bcsuddi.com
on your mobile browser.
Advertisement

ಒಕ್ಕಲಿಗ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

08:08 AM Aug 10, 2024 IST | BC Suddi
ಒಕ್ಕಲಿಗ ಅಭಿವೃದ್ಧಿ ನಿಗಮ   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Advertisement

ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-3 ರಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಾಡ್ಕಾರ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ/ ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನಾಂಗದವರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ, ಗಂಗಾ ಕಲ್ಯಾಣ ನೀರಾವರಿ, ಅರಿವು-ಶೈಕ್ಷಣಿಕ ಸಾಲ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ , ಸ್ವಯಂ ಉದ್ಯೋಗ ಸಾಲ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಗಳಲ್ಲಿ ಆರ್ಥಿಕ ನೆರವು ನೀಡಲಾಗುವುದು.

Advertisement

ಸೇವಾಸಿಂಧು ಪೋರ್ಟಲ್  http://sevasindhu.karnataka.gov.in ,     ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ಯೋಜನೆಗಳಲ್ಲಿ ಒಂದು ಬಾರಿ ಯಾವುದಾದರು ಯೋಜನೆಯ ಪ್ರಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿತರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅರ್ಜಿದಾರರ ಆಧಾರ್ ಕಾರ್ಡ ಹಾಗೂ ಬ್ಯಾಂಕ್ ಖಾತೆ ಜೋಡಣೆಯಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿನ ಹೆಸರು ಹೊಂದಾಣಿಕೆಯಾಗಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೆöÊಟ್  www.kvcdc.karnataka.gov.in     ಅಥವಾ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.

Tags :
Author Image

Advertisement