ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಟ್ ಮಾಡುವ ಮುನ್ನವೇ ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ..!

05:20 PM Jun 23, 2024 IST | Bcsuddi
Advertisement

ಬೆಂಗಳೂರು :ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿವೆ. ‌ಈ ಮಧ್ಯೆ ತರಕಾರಿಗಳ ಬೆಲೆಯಲ್ಲಿ ಹಾವು-ಏಣಿ ಆಟ ಶುರುವಾಗಿದೆ. ಟೊಮೆಟೊ ಒಂದು ವಾರದ ಹಿಂದೆ ಶತಕ ಭಾರಿಸಿತ್ತು. ಇದೀಗ ಕೊಂಚ ಕಡಿಮೆಯಾಗಿದೆ. ಈ ಮಧ್ಯೆ ಈರುಳ್ಳಿ ಬೆಲೆ ಏರಿಕರಯಾಗುತ್ತುದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ.

Advertisement

ಬೇಡಿಕೆಗೆ ತಕ್ಕಷ್ಟು ಈರುಳ್ಳಿ ಬರುತ್ತಿಲ್ಲ, ಹೀಗಾಗಿ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ 100 ರ ಗಡಿ ದಾಟುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯಕ್ಕೆ ಮುಂಗಾರು ಅವಧಿಗು ಮುನ್ನ ಪ್ರವೇಶಿಸಿದ್ದರಿಂದ ಈರುಳ್ಳಿ ಬೆಳೆ ನಾಶವಾಗಿದೆ. ಹೀಗಾಗಿ ರಾಜ್ಯದ ಗೋಡೌನ್​​​ನಲ್ಲಿ ಈರುಳ್ಳಿ ಕಡಿಮೆ ಸ್ಟಾಕ್​ ಇದೆ. ಹೀಗಾಗಿ ನಾಸಿಕ್​ನಿಂದ ಈರುಳ್ಳಿ ಆಮದು ಮಾಡಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜನರು ಈರುಳ್ಳಿ ಸ್ಟಾಕ್ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

 

ಒಟ್ಟಿನಲ್ಲಿ, ಮಳೆ ಕಾರಣದಿಂದಾಗಿ ದಿನದಿಂದ ದಿನಕ್ಕೆ ತರಕಾರಿಗಳ ಬೆಲೆ ಜಾಸ್ತಿಯಾಗುತ್ತಲೇ ಇದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದರೆ ಟೊಮೆಟೊ ಹಾಗೂ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗಲಿದೆ.

Advertisement
Next Article