For the best experience, open
https://m.bcsuddi.com
on your mobile browser.
Advertisement

ಕಡಿಮೆ ವೆಚ್ಚದ ಎಲ್ಲರ ಮೆಚ್ಚಿನ ತಿನಿಸು ಬಾಂಬೆ ಮಿಠಾಯಿ ನಿಷೇಧ - ವಿಷಕಾರಿ ರಾಸಾಯನಿಕಗಳ ಬಳಕೆ ಪತ್ತೆ

04:40 PM Feb 12, 2024 IST | Bcsuddi
ಕಡಿಮೆ ವೆಚ್ಚದ ಎಲ್ಲರ ಮೆಚ್ಚಿನ ತಿನಿಸು ಬಾಂಬೆ ಮಿಠಾಯಿ ನಿಷೇಧ   ವಿಷಕಾರಿ ರಾಸಾಯನಿಕಗಳ ಬಳಕೆ ಪತ್ತೆ
Advertisement

ಮಕ್ಕಳ ಅಚ್ಚುಮೆಚ್ಚಿನ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗುತ್ತಿದೆ. ಹೌದು, ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ವಿಷಕಾರಿ ರಾಸಾಯನಿಕಗಳ ಬಳಕೆಯನ್ನು ಆಹಾರ ಅಧಿಕಾರಿಗಳು ಪತ್ತೆಹಚ್ಚಿದ್ದು, ಪುದುಚೇರಿ ಸರ್ಕಾರವು ಕಳೆದ ವಾರದಿಂದ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಿದೆ. ಸದ್ಯ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗಿದೆ. ಬಾಂಬೆ ಮಿಠಾಯಿಯಲ್ಲಿ ಆರೋಗ್ಯಕ್ಕೆ ಹಾನಿಕರವಾದ ರೊಡಮೈನ್‌-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹೀಗಾಗಿ, ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್‌ ಗವರ್ನರ್‌ ತಮಿಳಿಸೈ ಸೌಂದರರಾಜನ್ ತಿಳಿಸಿದ್ದಾರೆ. ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ಬಳಸುವ ರೋಡಮೈನ್ ಬಿ ಮಾನವರ ದೇಹಕ್ಕೆ ವಿಷಕಾರಿಯಾಗುತ್ತದೆ. ಇದನ್ನು ಸೇವಿಸಿದರೆ ಜೀವಕೋಶಗಳು ಮತ್ತು ಅಂಗಾಂಶಗಳ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಇದರ ಸೇವನೆ ಕಾಲಾನಂತರದಲ್ಲಿ ಯಕೃತ್ತು ಹಾನಿ, ಗೆಡ್ಡೆಗಳು ಮತ್ತು ಮಾರಣಾಂತಿಕ ಕಾಯಿಲೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ವರದಿಯಾಗಿದೆ.

Author Image

Advertisement