For the best experience, open
https://m.bcsuddi.com
on your mobile browser.
Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇಮಕಾತಿ: ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅವಕಾಶ, ಪೂರ್ಣ ವಿವರ ಇಲ್ಲಿದೆ

01:06 PM Jul 08, 2024 IST | Bcsuddi
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇಮಕಾತಿ  ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅವಕಾಶ  ಪೂರ್ಣ ವಿವರ ಇಲ್ಲಿದೆ
Advertisement

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 3/9/2024ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಜಿಲ್ಲಾ ರಂಗಮಂದಿರದಲ್ಲಿ ಖಾಲಿ ಇರುವ ಹಿರಿಯ ಎಲೆಕ್ಟ್ರೀಷಿಯನ್ ಕಂ ಸೌಂಡ್ ಸೂಪರ್ ವೈಜ‌ರ್ 1 ಹುದ್ದೆಯನ್ನು ಪರಿಶಿಷ್ಟ ಪಂಗಡದ ಬ್ಯಾಕ್‌ಲಾಗ್ ಅಡಿ ಸರ್ಕಾರದ ಅಧಿಸೂಚನೆ ಅನ್ವಯ ಭರ್ತಿ ಮಾಡುತ್ತಿದೆ.

Advertisement

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 3/9/2024ರ ಸಂಜೆ 5 ಗಂಟೆಯೊಳಗೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇಲ್ಲಿಗೆ ತಲುಪಿಸತಕ್ಕದ್ದು.

ಹುದ್ದೆಯ ವಿವರಗಳು: ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 3/9/2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆ ಮಾಡುವವರು ಕನ್ನಡವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಇದರೊಂದಿಗೆ ಟೆಲಿಕಮ್ಯೂನಿಕೇಷನ್ (ಸೌಂಡ್ ಹಾಗೂ ಟಿ.ವಿ) ನಲ್ಲಿ ಡಿಪ್ಲೊಮಾ ಪದವಿ ಪಡೆದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ರೂ. 33,450 ರಿಂದ 62,600 ರೂ.ಗಳು. ವಿದ್ಯಾರ್ಹತೆ, ಜನ್ಮ ದಿನಾಂಕ ಮತ್ತು ಮೀಸಲಾತಿ ಮುಂತಾದ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ದೃಢೀಕರಿಸಿ ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ www.kannadasiri.karnataka.gov.in ವೆಬ್ ಸೈಟ್ ಅಥವ ದೂರವಾಣಿ ಸಂಖ್ಯೆ 080-22241325, 22213530 ಸಂಖ್ಯೆಗೆ ಕರೆ ಮಾಡಬಹುದು.

Author Image

Advertisement