ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕರ್ತವ್ಯ ನಿರ್ಲಕ್ಷ್ಯ; ಲೋಕೋಪಯೋಗಿ ಇಲಾಖೆ ಎಇಇ, ಪಂಚಾಯಿತಿ ಬಿಲ್ ಕಲೆಕ್ಟರ್ ಅಮಾನತು

07:45 AM May 02, 2024 IST | Bcsuddi
Advertisement

 

Advertisement

ದಾವಣಗೆರೆ: ಚೆಕ್‍ಪೋಸ್ಟ್‍ನಲ್ಲಿ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಹೊನ್ನಾಳಿ ವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಣವಪ್ಪ ಮತ್ತು ನ್ಯಾಮತಿ ತಾಲ್ಲೂಕು ಯರಗನಾಳ್ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕೇಶ್ ನಾಯ್ಕ ಇವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ 7 ರಂದು ಮತದಾನ ನಡೆಯಲಿದೆ. ಮಾದರಿ ನೀತಿ ಸಂಹಿತೆಯನ್ನು ಜಾರಿಗೆ ತರಲು ಜಿಲ್ಲೆಯಾದ್ಯಂತ 32 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಾಗುತ್ತಿದೆ. ದಾವಣಗೆರೆ, ಶಿವಮೊಗ್ಗದ ಅಂತರ್ ಜಿಲ್ಲಾ ಚೆಕ್‍ಪೋಸ್ಟ್ ಜೀನಹಳ್ಳಿ ಚೆಕ್‍ಪೋಸ್ಟ್‍ಗೆ ಸದರಿ ಅಧಿಕಾರಿ, ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು.

ದಾವಣಗೆರೆ ಕ್ಷೇತ್ರಕ್ಕೆ ಆಯೋಗದಿಂದ ನೇಮಕವಾಗಿರುವ ವಿಶೇಷ ವೆಚ್ಚ ವೀಕ್ಷಕರಾದ ಪ್ರತಿಭಾಸಿಂಗ್ ಮತ್ತು ಹೊನ್ನಾಳಿ ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಅಭಿಷೇಕ್ ರವರು ಏಪ್ರಿಲ್ 29 ರಂದು ಮಧ್ಯಾಹ್ನ 2.25 ರ ಸಮಯದಲ್ಲಿ ಅನಿರೀಕ್ಷಿತವಾಗಿ ಚೆಕ್‍ಪೋಸ್ಟ್‍ಗೆ ಭೇಟಿ ನೀಡಿದಾಗ ಚೆಕ್‍ಪೋಸ್ಟ್‍ನ ಕರ್ತವ್ಯದಲ್ಲಿ ಯಾರು ಸಹ ಇರಲಿಲ್ಲ. ಈ ಬಗ್ಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದರೂ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ.

ಚುನಾವಣಾ ಕರ್ತವ್ಯ ನಿರ್ಲಕ್ಷ್ಯತೆ ತೋರಿದ ಸದರಿ ನೌಕರರ ಮೇಲೆ ಪ್ರಜಾ ಪ್ರಾತಿನಿಧ್ಯಕಾಯ್ದೆ 1951 ರ 134 ನಿಯಮದನ್ವಯ ಹಾಗೂ ಸಿಸಿಎ ನಿಯಮ 1957 ರ ನಿಯಮ 10(1)(ಡಿ) ರನ್ವಯ ಅಮಾನತು ಮಾಡಿ ಆದೇಶಿಸಲಾಗಿದೆ.

Tags :
ಕರ್ತವ್ಯ ನಿರ್ಲಕ್ಷ್ಯ; ಲೋಕೋಪಯೋಗಿ ಇಲಾಖೆ ಎಇಇಪಂಚಾಯಿತಿ ಬಿಲ್ ಕಲೆಕ್ಟರ್ ಅಮಾನತು
Advertisement
Next Article