ಕರ್ನಾಟಕದಲ್ಲಿ ಬಿಜೆಪಿಗೆ ಬಲ : C Voter ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು ಸೀಟು..? ಇಲ್ಲಿದೆ ನೋಡಿ ಮಾಹಿತಿ
ನವದೆಹಲಿ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎಬಿಪಿ ನ್ಯೂಸ್-ಸಿ ವೋಟರ್ ನಡೆಸಿದ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಉತ್ತಮ ಫಲಿತಾಂಶದ ನಿರೀಕ್ಷೆ ಇದೆ.
ಹೌದು. ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಬಿಜೆಪಿ ನೇತೃತ್ವದ ಪೈಕಿ ಎನ್‌ಡಿಎ 23 ಮತ್ತು ಕಾಂಗ್ರೆಸ್ 5 ಸೀಟುಗಳನ್ನು ಗೆಲ್ಲಬಹುದು. ಕಾಂಗ್ರೆಸ್ ಶೇಕಡಾ 42 ಮತ ಪಡೆದರೆ, ಎನ್‌ಡಿಎ ಶೇಕಡಾ 53 ಮತಗಳನ್ನು ಪಡೆಯಬಹುದು ಎಂದು ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ಅಂದಾಜಿಸಿದೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಕೇವಲ 2 ಸ್ಥಾನಗಳನ್ನು ಗೆದ್ದಿದ್ದವು ಮತ್ತು ಬಿಜೆಪಿ ಏಕಾಂಗಿಯಾಗಿ 25 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿತ್ತು. ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಇನ್ನು ಈ ಬಾರಿ ಬಿಜೆಪಿ ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಹಿರಿಯರನ್ನು ಕೈಬಿಟ್ಟು ಹೊಸ ಅಭ್ಯರ್ಥಿಗಳಿಗೆ ಮಣೆ ಹಾಕಿದೆ.
ಹೀಗಾಗಿ ಬಿಜೆಪಿ ನೇತೃತ್ವದ ಪೈಕಿ ಎನ್‌ಡಿಎ 23 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಕರ್ನಾಟಕ ಅಷ್ಟೇ ಅಲ್ಲದೆ ರಾಜಸ್ಥಾನ, ಗುಜರಾತ್, ಅಸ್ಸಾಂ ಮತ್ತು ಹರಿಯಾಣದಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಬಹುದು ಎಂದು ಊಹಿಸಲಾಗಿದೆ. ಹಾಗೆಯೇ ಕೇರಳದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಲಿದ್ದರೆ, ಈಶಾನ್ಯ ಭಾರತದಲ್ಲಿ ಬಿಜೆಪಿ ಹೆಚ್ಚಿನ ಸೀಟು ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ.