ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳ ಪಟ್ಟಿ ಪ್ರಕಟ

08:01 AM May 17, 2024 IST | Bcsuddi
Advertisement

 

Advertisement

ಚಿತ್ರದುರ್ಗ ಕರ್ನಾಟಕ ಆ: ಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆಗೆ ಜೂನ್ 03ರಂದು ಮತದಾನ ಜರುಗಲಿದೆ. ಮತದಾನ ಸಂಬಂಧ ಚಿತ್ರದುರ್ಗ ಜಿಲ್ಲೆಯ ಮತದಾನ ಕೇಂದ್ರಗಳ ಪಟ್ಟಿಯನ್ನು ಆಗ್ನೇಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಗುರುವಾರ ಪ್ರಕಟಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಹಮ್ಮಿಕೊಂಡಿದ್ದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಅನುಮೋದಿಸಿರುವ ಮತದಾನ ಕೇಂದ್ರಗಳ ಅನುಮೋದಿತ ಪಟ್ಟಿಯನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಿಸಿದರು.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 7 ಮತದಾನ ಕೇಂದ್ರಗಳಿವೆ. ಮೊಳಕಾಲ್ಮುರು ತಾಲ್ಲೂಕಿನ ಶಿಕ್ಷಕ ಮತದಾರರು ಮೊಳಕಾಲ್ಮುರು ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದು.  ಚಳ್ಳಕೆರೆ ತಾಲ್ಲೂಕಿನ ಶಿಕ್ಷಕ ಮತದಾರರು ಚಳ್ಳಕೆರೆ ನಗರದ ಬಿ.ಎಂ.ಜಿ.ಹೆಚ್.ಎಸ್ ಶಾಲೆ, ಚಿತ್ರದುರ್ಗ ತಾಲ್ಲೂಕಿನ ಶಿಕ್ಷಕ ಮತದಾರರು ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ-01 ಮತ್ತು ಕೊಠಡಿ ಸಂಖ್ಯೆ-02ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದು. ಹಿರಿಯೂರು ತಾಲ್ಲೂಕಿನ ಶಿಕ್ಷಕ ಮತದಾರರು  ಹಿರಿಯೂರು ನಗರದ ತಾಲ್ಲೂಕು ಆಡಳಿತ ಸೌಧ, ಹೊಸದುರ್ಗ ತಾಲ್ಲೂಕಿನ ಶಿಕ್ಷಕ ಮತದಾರರು ಹೊಸದುರ್ಗ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಶಿಕ್ಷಕ ಮತದಾರರು  ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಉರ್ದು ಶಾಲೆಯ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಕ ಮತದಾರರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಶಿಸ್ತುಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈಗಾಗಲೇ ಕೋರಿಯರ್ ಸರ್ವಿಸ್‍ನವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಪಕ್ಷದವರು ಶಿಕ್ಷಕ ಮತದಾರರಿಗೆ ಉಚಿತ ಉಡುಗೊರೆಗಳನ್ನು ಕೋರಿಯರ್, ಪಾರ್ಸೆಲ್ ಕಳುಹಿಸುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ ಅವರು, ಉಚಿತ ಉಡುಗೊರೆಗಳನ್ನು ಸ್ವೀಕರಿಸುವುದು ಸಹ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಜತೆಗೆ ಸಂಬಂಧಪಟ್ಟವರ ವಿರುದ್ಧ ಅಮಾನತಿಗೆ ಆದೇಶ ಮಾಡಲಾಗುವುದು ಎಂದು ಹೇಳಿದರು.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 4615 ಶಿಕ್ಷಕ ಮತದಾರರು ಇದ್ದು, ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸರಿಯಾದ ವಿಧಾನ ಹಾಗೂ ಸರಿಯಾದ ಕ್ರಮದಲ್ಲಿ ಮತದಾನ ಮಾಡಬೇಕು. ಶಿಕ್ಷಕ ಮತದಾರರು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ವರ್ತಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸಿರುದ್ದೀನ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಸಿಪಿಐ(ಎಂ) ಡಿಒಸಿ ಸಿ.ಕೆ.ಗೌಸ್‍ಪೀರ್, ಸಿಪಿಐ ಜಿ.ಸಿ.ಸುರೇಶ್ ಬಾಬು, ಬಿಜೆಪಿಯ ಟಿ.ಯಶವಂತ್ ಕುಮಾರ್ ಇದ್ದರು.

Tags :
ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟ : ಟಿ.ವೆಂಕಟೇಶ್
Advertisement
Next Article