ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಲಬುರ್ಗಿ: ಖರ್ಗೆ ನಿಂದನೆ ಆರೋಪ - ಸೂಲಿಬೆಲೆ ವಿರುದ್ಧ ದೂರು ದಾಖಲು

11:36 AM Jan 20, 2024 IST | Bcsuddi
Advertisement

ಕಲಬುರ್ಗಿ: ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನಿಂದಿಸಿದ ಆರೋಪದ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.

Advertisement

ಮಲ್ಲಿಕಾರ್ಜುನ ಖರ್ಗೆರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಸೂಲಿಬೆಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಲಬುರ್ಗಿ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್​ ಅವರು ಕಲಬುರಗಿ ಪೊಲೀಸ್ ಆಯುಕ್ತ ಆರ್​.ಚೇತನ್​ಗೆ ದೂರು ಸಲ್ಲಿಸಿದ್ದಾರೆ.

ರಾಯಚೂರಿನಲ್ಲಿ ನಡೆದ ‘ನಮೋ ಭಾರತ’ ಎಂಬ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು, ಕಲಬುರ್ಗಿಯ ಇ.ಎಸ್.ಐ ಆಸ್ಪತ್ರೆ ನಿರ್ಮಾಣದ ವಿಚಾರವಾಗಿ ಖರ್ಗೆ ಕುಟುಂಬದ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದರು. ಖರ್ಗೆ ಸಾಹೇಬರ ಕಾಲದಲ್ಲಿಇ.ಎಸ್.ಐ ಆಸ್ಪತ್ರೆ ನಿರ್ಮಾಣ‌ ಮಾಡಲಾಯಿತು. ಆಸ್ಪತ್ರೆ ಮೇಲ್ಭಾಗದಲ್ಲಿ ಡ್ರೋನ್ ಕ್ಯಾಮರಾದಿಂದ ನೋಡಿದರೆ ಈ ಚಿತ್ರ ಕಾಣುತ್ತದೆ. ಮೊದಲ ಅಕ್ಷರ ಖ. ಕಟ್ಟಡ ಇರೋವರೆಗೆ ಅವರ ಹೆಸರು ಉಳಿಬೇಕು ಅಂತಾ ಈ ರೀತಿ ಮಾಡಲಾಗಿದೆ. ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ ಎಂದು ಕಿಡಿಕಾರಿದ್ದರು. ಸದ್ಯ ಈ ಸಂಬಂದ ದೂರು ದಾಖಲಾಗಿದೆ.

Advertisement
Next Article