ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಕಾಂಗ್ರೆಸ್ ಸರಕಾರ ಪೂರೈಸಿದ್ದು ವರುಷ ಮಾತ್ರ, ಸಾಧಿಸಿದ್ದು ಶೂನ್ಯ'- ಬಿವೈ ವಿಜಯೇಂದ್ರ

09:50 AM May 20, 2024 IST | Bcsuddi
Advertisement

ಬೆಂಗಳೂರು: ಕಾಂಗ್ರೆಸ್ ಸರಕಾರ ಪೂರೈಸಿದ್ದು ವರುಷ ಮಾತ್ರ, ಸಾಧಿಸಿದ್ದು ಶೂನ್ಯ. ಸರ್ಕಾರದ ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.

Advertisement

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿರುವ ವಿವೈ ವಿಜಯೇಂದ್ರ ಅವರು, ರಾಜ್ಯದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್? ಸರ್ಕಾರ ಒಂದು ವರ್ಷದಲ್ಲಿ ಬಿಟ್ಟಿ ಭಾಗ್ಯಗಳಿಗಾಗಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮ, ನಿರುದ್ಯೋಗ ಭವಣೆ ಹೆಚ್ಚಾಗಿದೆ. ಶಿಕ್ಷಣ ಕ್ಷೇತ್ರ ಎಡವಿ ಬಿದ್ದಿತು, ಉತ್ಪನ್ನ ಕ್ಷೇತ್ರ ಸೊರಗಿತು. ನಾರಿ ಕುಲ ರಕ್ಷಣೆ ಇಲ್ಲದೆ ನಲುಗಿತು, ಬೆಳೆಯೆಲ್ಲ ಒಣಗಿತು. ದಲಿತ ಕಲ್ಯಾಣ ಕಾರ್ಯಗಳು ಕುಸಿಯಿತು. ಹಿಂದುಳಿದವರ ಅಭಿವೃದ್ಧಿ ಹಿಂದುಳಿಯಿತು. ರೈತರ ಬಾಳು ಗೋಳಾಯಿತು ಎಂದು ಆರೋಪಿಸಿದ್ದಾರೆ.

ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಏನೆಲ್ಲಾ ಮಾಡಿದೆ? ಎಂದು ಇಂದು ಬಿಜೆಪಿ ಸುದ್ದಿಗೋಷ್ಠಿ ನಡೆಸಿ ಜನತೆಗೆ ತಿಳಿಸಲಿದೆ. ಜೊತೆಗೆ ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಲೋಪ-ದೋಷಗಳು, ವೈಫಲ್ಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

 

Advertisement
Next Article