For the best experience, open
https://m.bcsuddi.com
on your mobile browser.
Advertisement

'ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದಿಂದಲೇ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ'- ಪ್ರಧಾನಿ ಮೋದಿ

01:18 PM May 07, 2024 IST | Bcsuddi
 ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದಿಂದಲೇ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ   ಪ್ರಧಾನಿ ಮೋದಿ
Advertisement

ನವದೆಹಲಿ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದಿಂದಲೇ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ. ಈ ಘಟನೆಗೆ ರಾಜ್ಯ ಸರ್ಕಾರವೇ ನೇರವಾದ ಹೊಣೆ ಎಂದು ರಾಜ್ಯ ಸರ್ಕಾರವನ್ನು ದೂರಿದ್ದಾರೆ.

ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಸ್ಪಷ್ಟ ದೃಷ್ಟಿಕೋನವನ್ನು ಹೊಂದಿದ್ದೇವೆ. ಈ ರೀತಿಯ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಪ್ರಜ್ವಲ್ ದೇಶದಿಂದ ಹೊರಹೋಗಲು ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ.ಇದು ಕಾನೂನು ಸುವವ್ಯವಸ್ಥೆಗೆ ಸಂಬಂಧಿಸಿದ ವಿಷಯವಾದ ಕಾರಣ ಕ್ರಮ ವಹಿಸುವ ಜವಾಬ್ಧಾರಿಯು ಸರ್ಕಾರದ ಮೇಲಿದೆ ಎಂದು ರಾಜ್ಯ ಸರ್ಕಾರಕ್ಕೆ ಮೋದಿ ತಿರುಗೇಟು ನೀಡಿದ್ದಾರೆ.

ಸಹಸ್ರಾರು ವಿಡಿಯೋಗಳು ಇದೆ ಎಂದಾದರೆ ಅವು ಜೆಡಿಎಸ್ ಪಕ್ಷವು ಕಾಂಗ್ರಸ್ಸಿನ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದ ಅವಧಿಗೆ ಸೇರಿದೆ ಎನ್ನುವುದು ಗೊತ್ತಾಗುತ್ತಿದೆ. ಅವರು ಅಧಿಕಾರದಲ್ಲಿದ್ದಾಗ ವಿಡಿಯೋಗಳನ್ನ ಸಂಗ್ರಹಿಸಿದ್ದರು. ಒಕ್ಕಲಿಗರು ಮತದಾನ ಹಕ್ಕನ್ನು ಚಲಾಯಿಸಿದ ನಂತರ ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಸಂದರ್ಭದಲ್ಲಿ ಈ ವಿಡಿಯೋಗಳನ್ನ ಬಿಡುಗಡೆ ಮಾಡಿದ್ದಾರೆ. ಪ್ರಜ್ವಲ್ ಅವರನ್ನು ವಿದೇಶಕ್ಕೆ ಕಳುಹಿಸಿದ ಮೇಲೆಯೇ ವಿಡಿಯೋ ಬಿಡುಗಡೆ ಮಾಡಲಾಗಿದೆ. ಈ ಬೆಳವಣಿಗೆ ಬಹಳ ಅನುಮಾನಾಸ್ಪದವಾಗಿದೆ ಎಂದು ಹೇಳಿದ್ದಾರೆ.

Advertisement

Author Image

Advertisement