ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

12:56 PM May 24, 2024 IST | Bcsuddi
Advertisement

ನವದೆಹಲಿ: ಕಾಂಬೋಡಿಯಾದಲ್ಲಿ ಉದ್ಯೋಗ ಪಡೆಯುವ ಹುಮ್ಮಸ್ಸಿನಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರನ್ನ ಭಾರತೀಯ ರಾಯಭಾರ ಕಚೇರಿ ರಕ್ಷಣೆ ಮಾಡಿದೆ. 60 ಮಂದಿಯ ಮೊದಲ ಬ್ಯಾಚ್‌ ಭಾರತಕ್ಕೆ ಮರಳಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ.

Advertisement

ಕಾಂಬೋಡಿಯಾ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಸಿಹಾನೌಕ್ವಿಲ್ಲೆನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಜಿನ್‌ಬೆ-4 ಎಂಬ ಸ್ಥಳದಲ್ಲಿ ಭಾರತೀಯರನ್ನ ರಕ್ಷಣೆ ಮಾಡಿದ್ದಾರೆ. ಅಲ್ಲದೇ ಇನ್ಮುಂದೆ ಉದ್ಯೋಗಕ್ಕಾಗಿ ಕಾಂಬೋಡಿಯಾಕ್ಕೆ ಬರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮೋದಿಸಿದ ಅಧಿಕೃತ ಏಜೆಂಟರ ಮೂಲಕ ಮಾತ್ರವೇ ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆಯನ್ನೂ ನೀಡಿದೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಬೋಡಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ನಮ್ಮ ಅಧಿಕಾರಿಗಳ ತಂಡ ವಿದೇಶದಲ್ಲಿರುವ ಭಾರತೀಯರಿಗೆ ಯಾವಾಗಲು ಸಹಾಯಕ್ಕೆ ಬದ್ಧವಾಗಿದೆ. ಸದ್ಯ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿಯನ್ನ ರಕ್ಷಿಸಿದ್ದೇವೆ. ಅದಕ್ಕಾಗಿ ನಮ್ಮ ಇಡೀ ಅಧಿಕಾರಿಗಳ ತಂಡಕ್ಕೆ ಧನ್ಯವಾದ ಸಲ್ಲಿಸುತ್ತೇವೆ ಎಂದು ಹೇಳಿದೆ.

 

Advertisement
Next Article