ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಡಾನೆ ದಾಳಿಗೆ 45 ವರ್ಷದ ಮಹಿಳೆ ಬಲಿ: ಗ್ರಾಮಸ್ಥರಿಂದ ಪ್ರತಿಭಟನೆ

12:35 PM Nov 08, 2023 IST | Bcsuddi
Advertisement

ಚಿಕ್ಕಮಗಳೂರು: ಚಿಕ್ಕಮಗಳೂರಿನ ಹೆಡದಾಳು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

Advertisement

ಮೀನಾ (45) ಮೃತ ಕಾರ್ಮಿಕ ಮಹಿಳೆ. ಬುಧವಾರ ಬೆಳಿಗ್ಗೆ ಮೀನಾ ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಆನೆ ದಾಳಿ ನಡೆಸಿದೆ. ಈ ವೇಳೆ ಮಹಿಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಆದರೆ ಸಾಧ್ಯವಾಗಿಲ್ಲ. ಇದೆ ವೇಳೆ ಆನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮೀನಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುಮಾರು 7 ಕಾಡಾನೆಗಳ ಹಿಂಡು ಕಾಫಿ ತೋಟದ ಸುತ್ತಮುತ್ತವೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಓಡಾಡುವುದು ಕಷ್ಟವಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಒತ್ತಾಯಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಘಟನೆ ನಡೆದ ಸ್ಥಳದಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಆನೆ ಹಿಂಡಿನಿಂದ ಬೇರ್ಪಟ್ಟ ಒಂಟಿ ಸಲಗ ಒಂದು ತಿಂಗಳ ಹಿಂದೆ ಅರೇನೂರು ಗ್ರಾಮದ ಕಾರ್ಮಿಕನ ಮೇಲೆ ದಾಳಿ ಮಾಡಿತ್ತು. ಕಾಡಾನೆ ‌ಸಂಚಾರ ಮಾಡುತ್ತಿರುವ ಕುರಿತು ಮತ್ತು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಆದರೂ ಕೂಡ ಕ್ರಮಕೈಗೊಳ್ಳದ ಅಲ್ದೂರು ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Next Article