ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಸಾವು

11:38 AM Dec 03, 2023 IST | Bcsuddi
Advertisement

ಮೂಡಿಗೆರೆ: ಮೇಕನಗದ್ದೆ ಬಳಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆಯೊಂದು ಶನಿವಾರ ತಡರಾತ್ರಿ ಮೃತಪಟ್ಟಿದೆ. ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಸಾಗಿಸಲು ಸರ್ಕಾರದ ಆದೇಶದ ಮೇರೆಗೆ ಕಳೆದ ಒಂದು ವಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು.

Advertisement

ನಿನ್ನೆ ರಾತ್ರಿ ಮೇಕನಗದ್ದೆ ಗ್ರಾಮದ ಸಮೀಪ ರಾತ್ರಿ ಒಂಟಿ ದಂತದ ಸಲಗವೊಂದು ಕಾಣಿಸಿಕೊಂಡಿದ್ದು, ಅರವಳಿಗೆ ಚುಚ್ಚುಮದ್ದು ಹಾಕಲಾಗಿತ್ತು. ಆದರೆ ಅರವಳಿಕೆ ಚುಚ್ಚುಮದ್ದು ಹಾಕಿದ ನಂತರ ಆನೆಯ ಜಾಡು ಹಿಡಿದು ಹೋದಾಗ ಸ್ವಲ್ಪ ದೂರದಲ್ಲೇ ಕಾಡಾನೆ ಮೃತಪಟ್ಟು ಬಿದ್ದಿದ್ದು ಕಂಡುಬಂದಿದೆ.

ಶನಿವಾರ ರಾತ್ರಿ ಸುಮಾರು 11-30 ರ ವೇಳೆಗೆ ಈ ಘಟನೆ ನಡೆದಿದ್ದು, ಇತ್ತೀಚೆಗೆ ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ್ ಗೌಡ ಅವರನ್ನು ಕಾಡಾನೆಯೊಂದು ತುಳಿದು ಸಾಯಿಸಿದ್ದ ದೊಡ್ಡಗೊಳ್ಳ ಎಂಬ ಸ್ಥಳದ ಸಮೀಪದಲ್ಲಿಯೇ ಕಾಡಾನೆ ಸತ್ತು ಬಿದ್ದಿದೆ ಎಂದು ತಿಳಿದುಬಂದಿದೆ.

ಆನೆ ಸಾವಿಗೆ ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಾರಣ ತಿಳಿಯಲಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Advertisement
Next Article