ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ

07:09 AM Jul 10, 2024 IST | Bcsuddi
Advertisement

 

Advertisement

   ದಾವಣಗೆರೆ : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪೆÇ್ರೀತ್ಸಾಹ ಧನ ಸಹಾಯಕ್ಕೆ ಕರ್ನಾಟಕ ಕಾರ್ಮಿಕ ಮಂಡಳಿಯ ವೆಬ್‍ಸೈಟ್ WWW.klwbapps.karnataka.gov.in      ಮೂಲಕ ಅರ್ಜಿಆಹ್ವಾನಿಸಲಾಗಿದೆ. 

ಶೈಕ್ಷಣಿಕ ಪೆÇ್ರೀತ್ಸಾಹ ಧನ ಸಹಾಯ ಬಯಸುವ ವಿದ್ಯಾಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪ.ಜಾ, ಪ.ಪಂ.ಶೇ 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಹಾಗೂ ಕಾರ್ಮಿಕರ ಮಾಸಿಕ ವೇತನ ರೂ.35,000 ಗಿಂತ ಮೀರಿರಬಾರದು. ಅರ್ಜಿ ಸಲ್ಲಿಸಲು  2025 ರ ಜನವರಿ 31 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಭೇಟಿ ನೀಡಬಹುದು. ಅಥವಾ ದೂ,ಸಂ 080-23475188, 8277291175, 8277120505, 9141585402, 9141602562  ಗೆ ಕರೆ ಮಾಡಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

Tags :
ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ
Advertisement
Next Article