ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

11:30 AM Jun 18, 2024 IST | Bcsuddi
Advertisement

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

Advertisement

ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದರೊಂದಿಗೆ ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದರಿಂದ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲು ಸಾಧ್ಯವಿಲ್ಲ.

ಭವಾನಿ ರೇವಣ್ಣ ಅವರು ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಭವಾನಿ ರೇವಣ್ಣ ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ತಿಳಿಸಿದೆ.

ಅಪಹರಣ ಪ್ರಕರಣ ಸಂಬಂಧ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ವಿಚಾರಣಾ ನ್ಯಾಯಾಲಯ ನಿರಾಕರಿಸಿತ್ತು. ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೊರೆಹೋಗಿದ್ದರು. ಹೈಕೋರ್ಟ್​​ನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಇಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

 

Advertisement
Next Article