ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರ ಸಾವು - ಮೋದಿ ಸಂತಾಪ

09:37 AM Jun 13, 2024 IST | Bcsuddi
Advertisement

ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ 40 ಮಂದಿ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Advertisement

ಕುವೈತ್ ಅಗ್ನಿ ದುರಂತದ ಕುರಿತು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪದ ನುಡಿಗಳನ್ನು ಹಂಚಿಕೊಂಡಿದ್ದಾರೆ. ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಅತ್ಯಂತ ದುಃಖಕರವಾಗಿದೆ. ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಾವಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಕುವೈತ್‌ನ ಮಂಗಾಫ್ ನಗರದಲ್ಲಿ ಕಾರ್ಮಿಕರ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 40 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 43ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕುವೈತ್ ನಗರದಲ್ಲಿ ಅಗ್ನಿ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಜೈಶಂಕರ್ ತಿಳಿಸಿದ್ದಾರೆ.

 

Advertisement
Next Article