For the best experience, open
https://m.bcsuddi.com
on your mobile browser.
Advertisement

ಕೃತಕ ಬಣ್ಣ ಬಳಸಿ ಆಹಾರ ಪದಾರ್ಥಗಳು ತಯಾರಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

07:42 AM Aug 06, 2024 IST | BC Suddi
ಕೃತಕ ಬಣ್ಣ ಬಳಸಿ ಆಹಾರ ಪದಾರ್ಥಗಳು ತಯಾರಿಸಿದರೆ ಕಠಿಣ ಕ್ರಮ  ಜಿಲ್ಲಾಧಿಕಾರಿ ಡಾ  ಎನ್ ಶಿವಶಂಕರ್
Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಹೋಟೆಲ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಅಂಗಡಿಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ, ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸುವ ಜತೆಗೆ ಕೃತಕ ಬಣ್ಣ ಬಳಸಿ ಆಹಾರ ಪದಾರ್ಥಗಳು ತಯಾರಿಸುವವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸುವಂತೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಸರ‍್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸೇವನೆಯು ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಸರ‍್ವಜನಿಕರಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಶಾಲೆ ಅಂಗನವಾಡಿ ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಿ ಆಹಾರ ತಯಾರಿಸುವುದರ ಬಗ್ಗೆ, ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ ಅರಿವು ಮೂಡಿಸಬೇಕು. ಬೀದಿಬದಿ ವ್ಯಾಪಾರಿಗಳು ,ಹೋಟೆಲ್ ಗಳು, ರೆಸ್ಟೋರೆಂಟ್ ಗಳಿಗೆ ಭೇಟಿ ಮಾಡಿ ಕೃತಕ ಬಣ್ಣ ಬಳಸದಂತೆ ಎಚ್ಚರಿಕೆವಹಿಸಬೇಕು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನಗೊಳಿಸಲು ಇಲಾಖಾವಾರು ವಿಷಯಗಳ ಬಗ್ಗೆ ರ‍್ಚಿಸಿ ನೋಂದಣಿ ಪರವಾನಗಿ ತೆಗೆದುಕೊಳ್ಳುವಂತೆ ಸೂಚಿಸಿದರು.

ವೆಜ್ ಆಹಾರ,  ಚಿಕನ್, ಫಿಶ್ ಇತರೆ ಕಬಾಬ್ ಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸಿದರೆ ಏಳು ರ‍್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು ೧೦ ಲಕ್ಷದವರೆಗೆ ದಂಡವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-೨೦೦೬ ರ ನಿಯಮ ೫೯ರಡಿ  ವಿಧಿಸಲಾಗುವುದು ಎಂದು ತಿಳಿಸಿದರು

ಆಹಾರ ಘಟಕಗಳು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ನೋಂದಣಿ ಹಾಗೂ ಪರವಾನಗಿಗಳನ್ನು ಹೆಚ್ಚು ಹೆಚ್ಚು ಮಾಡಿಸಿ, ಆಹಾರದ ಸ್ಯಾಂಪಲ್ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಗ್ರಹಿಸಿ, ಅಸುರಕ್ಷಿತ ಆಹಾರ ಕಂಡುಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಬಗ್ಗೆ ವರದಿಯಾಗಬೇಕು.

ಆಹಾರ ಉದ್ದಿಮೆ ಸ್ಥಳಗಳಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ಮಾಡಿ, ಬೀದಿ ಬೀದಿಗಳಲ್ಲಿ ತಯಾರಿಸುವ ಆಹಾರದ  ಸುರಕ್ಷತೆ ಹಾಗೂ ಗುಣಮಟ್ಟದ ಬಗ್ಗೆ ನಿಗಾ ವಹಿಸಿ, ನಿಯಮಿತವಾಗಿ ಸರ‍್ವಜನಿಕರಿಂದ ಬಂದಂತಹ ದೂರಿನನ್ವಯ ಆಹಾರ ಮಾದರಿಗಳನ್ನು ಸಂಗ್ರಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಆಹಾರ ಸೇವನೆಯಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುವ ಜತೆಯಲ್ಲಿ ಸರ‍್ವಜನಿಕರಿಗೆ ಅರಿವು ಮೂಡಿಸಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ರ‍್ಮೇಂದ್ರ ಮಾತನಾಡಿ  ಜಿಲ್ಲೆಯಲ್ಲಿ ೫೧೭೭ ಆಹಾರ ನೋಂದಣಿ ಹಾಗೂ ೧೫೯೩ ಆಹಾರ ಪರವಾನಗಿ ಇದ್ದು ಒಟ್ಟು ಶೇಕಡ ೧೨೦ ಪ್ರಗತಿ ಸಾಧಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

Tags :
Author Image

Advertisement