For the best experience, open
https://m.bcsuddi.com
on your mobile browser.
Advertisement

ಕೃಷಿ ಸಿಂಚಾಯಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

08:04 AM Jan 12, 2024 IST | Bcsuddi
ಕೃಷಿ ಸಿಂಚಾಯಿ ಯೋಜನೆ  ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Advertisement

ಹೊಸಪೇಟೆ: ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆದಿರುವ ಅಥವಾ ತೋಟಗಾರಿಕೆ ಬೆಳೆ ಬೆಳೆಯಲು ಆಸಕ್ತಿ ಹೊಂದಿರುವ ನೀರಾವರಿ ಸೌಲಭ್ಯ ಹೊಂದಿರುವ ರೈತರು ಹನಿ ನೀರಾವರಿ ಘಟಕ ಅಳವಡಿಕೆಗೆ ಮೊದಲನೇ 2 ಹೆಕ್ಟರ್ ಪ್ರದೇಶಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90ರಷ್ಟು ಸಹಾಯಧನ ಹಾಗೂ ನಂತರದ 3 ಹೆಕ್ಟರ್ ಪದ್ರೇಶಕ್ಕೆ ಎಲ್ಲಾ ವರ್ಗದ ರೈತರಿಗೆ ಶೇ.45ರಷ್ಟು ಸಹಾಯಧನ ಪಡಯಲು ಅವಕಾಶವಿರುತ್ತದೆ.

Advertisement

ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರು ಈಗಾಗಲೇ ಹನಿ ನೀರಾವರಿ ಘಟಕ್ಕೆ ಸಹಾಯಧನ ಪಡೆದಿದ್ದರೆ, 7 ವರ್ಷದ ನಂತರ ಪುನಃ ಸಹಾಯಧನ ಪಡೆಯಲು ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿಜಯನಗರ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
Author Image

Advertisement