ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಕೆಪಿಎಸ್‌ಸಿ ನೇಮಕಾತಿಯಲ್ಲಿ ಬಹುದೊಡ್ಡ ಅಕ್ರಮ ನಡೆದಿದೆ'- ಬಿಜೆಪಿ ಆರೋಪ

11:00 AM Mar 31, 2024 IST | Bcsuddi
Advertisement

ಬೆಂಗಳೂರು : ಕೆಪಿಎಸ್‌ಸಿ ನೇಮಕಾತಿಯಲ್ಲಿ ಬಹುದೊಡ್ಡ ಅಕ್ರಮ ನಡೆದಿದೆ. ನೇಮಕಾತಿ ಪಟ್ಟಿಯೇ ನಾಪತ್ತೆಯಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿದೆ.

Advertisement

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಕಲೆಕ್ಷನ್‌, ಕಮಿಷನ್‌, ಟ್ರಾನ್ಸ್‌ಫರ್‌ ದಂಧೆ ನಡೆಸುತ್ತಿರುವ ಮಜಾವಾದಿ ಸಿದ್ದರಾಮಯ್ಯ ಸರ್ಕಾರ, ಇದೀಗ ಕೆಪಿಎಸ್‌ಸಿ ನೇಮಕಾತಿಯಲ್ಲೂ ಅಕ್ರಮ ನಡೆಸಿದೆ. ಈ ಅಕ್ರಮ ಬಯಲಿಗೆ ಬರಬಾರದೆಂದು ನೇಮಕಾತಿ ಪಟ್ಟಿಯನ್ನೇ ಕಳ್ಳತನ ಮಾಡಿ ನಾಪತ್ತೆಯಾಗಿದೆ ಎಂದು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದೆ ಎಂದು ಕಿಡಿಕಾರಿದೆ.

ಮಜಾವಾದಿ ಸರ್ಕಾರ ಅಧಿಕಾರದಲ್ಲಿದ್ದಾಗ ಸರ್ಕಾರಿ ಕಡತಗಳು ಸುಟ್ಟು ಹೋಗುವುದು, ನಾಪತ್ತೆ ಆಗುವುದು ಸಾಮಾನ್ಯವಾಗಿ ಬಿಟ್ಟಿದೆ. ಕಡತಗಳು ದೊರೆತರೇ ಮಾತ್ರ ಕಳ್ಳರು ಸಿಕ್ಕಿ ಬೀಳುತ್ತಾರೆ. ಕಡತವೇ ಇಲ್ಲವೆಂದರೆ, ಕಳ್ಳರು ರಾಜಾರೋಷವಾಗಿ ಓಡಾಡಬಹುದು ಎನ್ನುವುದೇ ಸ್ಲೀಪಿಂಗ್ ಸರ್ಕಾರದ ಮೂಲ ಮಂತ್ರ ಎಂದು ಬಿಜೆಪಿ ಟ್ವೀಟ್ ಮಾಡಿದೆ.

Advertisement
Next Article