ಕೆಫೆ ಬಾಂಬ್ ಸ್ಫೋಟ: ಉಗ್ರರು 10 ದಿನಗಳ ಕಾಲ ಎನ್ ಐಎ ಕಸ್ಟಡಿಗೆ
02:56 PM Apr 13, 2024 IST | Bcsuddi
Advertisement
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ರುವಾರಿ ಅಬ್ದುಲ್ ಮತೀನ್ ತಾಹಾನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಸಗಫೋಟಕ್ಕೆ ಕಾರಣರಾಗಿದ್ದ ಉಗ್ರರು ಪ. ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದರು. ಬಳಿಕ ಉಗ್ರರನ್ನು ಎನ್ ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಎನ್ ಐಎ ಅಧಿಕಾರಿಗಳು ಉಗ್ರರನ್ನು ಬೆಂಗಳೂರಿಗೆ ಕರೆತಂದ ಬಳಿಕ ಅವರನ್ನು ಮಂಢಿವಾಳದ ಎಫ್ ಎಸ್ ಎಲ್ ನೆಂಟರ್ ಸಮೀಪದ ಇಂಟ್ರಾಗೇಷನ್ ಸೆಲ್ ನಲ್ಲಿ ವಿಚಾರಣೆ ನಡೆಸಿದ್ದಾರೆ.
ನಂತರ ಉಗ್ರರನ್ನು ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಧೀಶರ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು 10 ದಿನಗಳ ಕಾಲ ಉಗ್ರರನ್ನು ಎನ್ ಐಎ ವಶಕ್ಕೆ ನೀಡಿ ಆದೇಶಿಸಿದ್ದಾರೆ.
Advertisement