ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕೆ.ಸೆಟ್, ಯುಜಿಸಿ ನೆಟ್ ಪರೀಕ್ಷೆಯ ತರಬೇತಿಗೆ ಅರ್ಜಿ ಆಹ್ವಾನ

07:32 AM Aug 03, 2024 IST | BC Suddi
Advertisement

 

Advertisement

  ದಾವಣಗೆರೆ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕೆಇಎ (ಕರ್ನಾಟಕ ಪರೀಕ್ಷೆ ಪ್ರಾಧಿಕಾರ) ಹಾಗೂ ನವದೆಹಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್), ರಾಷ್ಟ್ರ ಮಟ್ಟದ ಕಾಲೇಜು ಸಹಾಯಕ ಪ್ರಧ್ಯಾಪಕರ  (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ  ಸಹಾಯಕರ (ಜೆಆರ್‍ಎಫ್) ಹುದ್ದೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಆ.09 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು

ಹೆಚ್ಚಿನ ವಿವರಗಳಿಗೆ ದೂ.ಸಂ. 0821-2515944 ಗೆ ಸಂಪರ್ಕಿಸಬಹುದಾಗಿದೆಂದು ಕರಾಮುವಿ ಕುಲಸಚಿವರಾದ ಪ್ರೋ. ಕೆ.ಬಿ.ಪ್ರವೀಣ ತಿಳಿಸಿದ್ದಾರೆ.

Tags :
ಕೆ.ಸೆಟ್ಯುಜಿಸಿ ನೆಟ್ ಪರೀಕ್ಷೆಯ ತರಬೇತಿಗೆ ಅರ್ಜಿ ಆಹ್ವಾನ
Advertisement
Next Article