ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಕೇಂದ್ರ ನೀಡಿದ ಹಣವನ್ನು ಕಾಂಗ್ರೆಸ್ ರೈತರಿಗೆ ಸರಿಯಾಗಿ ತಲುಪಿಸಿಲ್ಲ'- ಆರ್ ಅಶೋಕ್

12:43 PM May 17, 2024 IST | Bcsuddi
Advertisement

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗಾಗಿ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆಗೊಳಿಸಿದೆ. ಆದರೆ ಇದಕ್ಕೆ ಪ್ರತಿಯಾಗಿ ಸಿಎಂ ಸಿದ್ದರಾಮಯ್ಯನವರ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಿಲ್ಲ. ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.

Advertisement

ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ. ಸಿದ್ದರಾಮಯ್ಯ ಅವರು ತಕ್ಷಣ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿ. ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್ ಗಳಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಆದೇಶಿಸಲಿ. ಒಂದು ವೇಳೆ ಬ್ಯಾಂಕ್ ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಲಿ ಎಂದರು.

ಈ ಹಿಂದೆ ಅಧಿಕಾರದಲ್ಲಿದ್ದ ನಮ್ಮ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗಾದವರಿಗೆ ದುಪ್ಪಟ್ಟು ಪರಿಹಾರ ಒದಗಿಸಿತ್ತು. ಕೇಂದ್ರ ಸರ್ಕಾರದೊಂದಿಗೆ ರಾಜ್ಯದ ಪಾಲನ್ನೂ ನೀಡಿತ್ತು. ಈಗ ಪಾಪರ್ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಎಣಿಸುತ್ತಿರುವ ಸಿಎಂ ಸಿದ್ದರಾಮಯ್ಯ ರೈತರ ಸಂಕಷ್ಟಕ್ಕೂ ಮಿಡಿಯದೆ ಸುಮ್ಮನಿದ್ದಾರೆ ಎಂದು ಕಿಡಿಕಾರಿದ್ದಾರೆ.

 

Advertisement
Next Article