ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕೇಂದ್ರ ವಕ್ಫ್ ತಿದ್ದುಪಡಿ ಕಾಯ್ದೆಗೆ ವಿರೋಧ - ತಿದ್ದುಪಡಿ ಒಪ್ಪುವುದಿಲ್ಲ ಎಂದು ನಿರ್ಣಯಿಸಿದ ರಾಜ್ಯ ವಕ್ಫ್ ಬೋರ್ಡ್

10:14 AM Aug 30, 2024 IST | BC Suddi
Advertisement

ಬೆಂಗಳೂರು: ಕೇಂದ್ರ ಸರ್ಕಾರದ‌ ಉದ್ದೇಶಿತ ವಖ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಕ್ಫ್ ಬೋರ್ಡ್ ವಿರೋಧ ವ್ಯಕ್ತಪಡಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ನೇತೃತ್ವದಲ್ಲಿ ನಡೆದ ವಖ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆ ಗೆ ವಿರೋಧ ಪಡಿಸಿ ನಿರ್ಣಯ ಕೈಗೊಂಡಿದೆ. ನಂತರ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ನಿರ್ಣಯದ ಪ್ರತಿ ನೀಡಿ ಕೇಂದ್ರಕ್ಕೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಪತ್ರ ಬರೆಯಲು ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ರಚನೆ ಮಾಡಿರುವ ಜಂಟಿ ಸಲಹಾ ಸಮಿತಿ ಗೂ ಯಾವುದೇ ರೀತಿಯ ಮಾಹಿತಿ ಕೊಡುವುದಿಲ್ಲ. ನಮ್ಮದು ಸ್ವಾಯತ್ತ ಸಂಸ್ಥೆ ಯಾಗಿದ್ದು, ಉದ್ದೇಶಿತ ತಿದ್ದುಪಡಿ ಕಾಯ್ದೆ ಸಮುದಾಯದ ಹಿತಾ ಸಕ್ತಿ ಗೆ ವಿರುದ್ದ ವಾಗಿದೆ. ಇದರ ಹಿಂದಿನ ಉದ್ದೇಶ ಬೇರೆ ಇದೆ ಎಂದು ವಖ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆ ಅಭಿಪ್ರಾಯವನ್ನ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಯಿತು. ಮುಂದಿನ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಕೋರಿದ್ದಾರೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article