ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕೇಕ್‌ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ: ಬಾಲಕ ಮೃತ್ಯು, ದಂಪತಿ ಗಂಭೀರ

11:41 AM Oct 08, 2024 IST | BC Suddi
Advertisement

ಬೆಂಗಳೂರು: ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ ಕೇಕ್‌ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೇ 5 ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ.

Advertisement

ಮೃತ ಮಗು ಧೀರಜ್ (5) ಎಂದು ತಿಳಿದು ಬಂದಿದೆ.

ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಾಲರಾಜ್‌ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಮಗನಿಗಾಗಿ ಮನೆಗೆ ಕೇಕ್‌ ತೆಗೆದುಕೊಂಡು ಹೋಗಿದ್ದರು. ಮನೆಯಲ್ಲಿ ಪತ್ನಿ ಮತ್ತು ಮಗುವಿನ ಜೊತೆ ಸೇರಿ ಮೂವರು ಕೇಕ್ ತಿಂದಿದ್ದರು. ಕೇಕ್ ತಿಂದ ನಂತರ ಮೂವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು‌ ಹೇಳಲಾಗಿದೆ.

ತಕ್ಷಣ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮೂವರ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಧೀರಜ್‌ ತೀವ್ರ ಅಸ್ವಸ್ಥಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬಾಲರಾಜ್, ನಾಗಲಕ್ಷ್ಮಿ ದಂಪತಿ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ.

ಕೆಪಿ ಅಗ್ರಹಾರ ಠಾಣೆ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕೇಕ್ ತಂದಿದ್ದು ಯಾವ ಬೇಕರಿಯಿಂದ? ಕೇಕ್‌ನಲ್ಲಿರೋ ಅಂಶಗಳಿಂದ ಅಸ್ವಸ್ಥರಾಗಿದ್ದಾರಾ ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಪುಡ್ ಪಾಯನ್ಸ್‌ನಿಂದ ಸಾವು ಸಂಭವಿಸಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಬಳಿಕ ನಿಜಾಂಶ ತಿಳಿದು ಬರಬೇಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Next Article