For the best experience, open
https://m.bcsuddi.com
on your mobile browser.
Advertisement

ಕೈ ಕೊಟ್ಟ ಶೆಟ್ಟರ್ - ಲಕ್ಷ್ಮಣ ಸವದಿ ಜೊತೆಗೆ ಮಾತುಕತೆ ನಡೆಸಿದ ಡಿಕೆಶಿ

11:30 AM Jan 26, 2024 IST | Bcsuddi
ಕೈ ಕೊಟ್ಟ ಶೆಟ್ಟರ್   ಲಕ್ಷ್ಮಣ ಸವದಿ ಜೊತೆಗೆ ಮಾತುಕತೆ ನಡೆಸಿದ ಡಿಕೆಶಿ
Advertisement

ಜನವರಿ:ಕರ್ನಾಟಕದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮರು ಸೇರ್ಪಡೆಗೊಂಡಿದ್ದಾರೆ. ಇವರೊಂದಿಗೆ ಪಕ್ಷ ತೊರೆದಿದ್ದ ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕ ಲಕ್ಷ್ಮಣ ಸವದಿ ಅವರನ್ನು ಕರೆ ತರುವ ಪ್ರಯತ್ನಗಳು ನಡೆಯುತ್ತಿದೆ ಎಂಬ ಗುಮಾನಿ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲಕ್ಷ್ಮಣ್ ಸವದಿ ಅವರೊಂದಿಗೆ ಕಾಂಗ್ರೆಸ್ ನಲ್ಲೇ ಉಳಿಸಿಕೊಳ್ಳಲು ಮಾತುಕತೆ ನಡೆಸಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಸೇರಿದ ಬಿಜೆಪಿ ನಾಯಕರಲ್ಲಿ ಸವದಿ ಕೂಡ ಒಬ್ಬರು, ಅವರು ಮೇ 10 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಗೆ ಸೇರಿದ್ದರು.

ಈ ವೇಳೆ ಮಾಧ್ಯಮಗಳಿಗೆ ಡಿಕೆ ಶಿವಕುಮಾರ್‍ ಪ್ರತಿಕ್ರಿಯೆ ನೀಡಿದ್ದು ಶೆಟ್ಟರ್ ಹಿರಿತನವನ್ನು ಪರಿಗಣಿಸಿ ಕಾಂಗ್ರೆಸ್ ಅವರನ್ನು ಗೌರವದಿಂದ ನಡೆಸಿಕೊಂಡಿತ್ತು.ರಾಮಮಂದಿರ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಹಲವು ಹೇಳಿಕೆಗಳನ್ನು ನೀಡಿದ್ದಾರೆ.ಅವರನ್ನು ಬಲವಂತದಿಂದ ಮತ್ತೆ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದಾರೋ ಇಲ್ಲವೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

Advertisement

Author Image

Advertisement