ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕೈ ನಡುಗುತ್ತಿದೆ, ದಯಮಾಡಿ ಒಂದು ಸಿಗರೇಟ್ ಕೊಡಿಸಿ : ಪೊಲೀಸರಿಗೆ ಡಿ ಬಾಸ್‌ ರಿಕ್ವೇಸ್ಟ್‌!

11:03 AM Jun 13, 2024 IST | Bcsuddi
Advertisement

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ 6 ದಿನಗಳ ಕಾಲ ಪೊಲೀಸ್‌ ಕಸ್ಟಡಿಯಲ್ಲಿರುವ ಆರೋಪಿ ದರ್ಶನ್‌ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ ಒಂದೇ ಒಂದು ಸಿಗರೇಟ್‌ ಕೊಡಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ವಿಚಾರಣೆಯಲ್ಲಿ ನಾನು ಏನು ತಪ್ಪು ಮಾಡಿಲ್ಲ, ನನಗೆ ಗೊತ್ತಿಲ್ಲ. ನಾನು ಕೊಲೆ ಮಾಡಲು ಹೇಳಿಲ್ಲ, ಮಾಡಿಸಿಯೂ ಇಲ್ಲ ಎಂದು ಅಲವತ್ತುಕೊಂಡಿದ್ದಾರೆ. ಇದೇ ವೇಳೆ ದಯಮಾಡಿ ಒಂದೇ ಒಂದು ಸಿಗರೇಟ್‌ ಕೊಡಿಸಿ, ಕೈಗಳು ನಡುಗುತ್ತಿವೆ ಅಂತ ಪೊಲೀಸರಿಗೆ ಬೇಡಿಕೊಂಡಿದ್ದಾರೆ. ಇದಕ್ಕೆ ಗರಂ ಆದ ಪೊಲೀಸರು, ಸಿಗರೇಟ್‌ ಕೊಡಿಸಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ತಿಳಿದು ಬಂದಿದೆ. ಸದ್ಯ ಆರೋಪಿ ದರ್ಶನ್‌, ಪೊಲೀಸರ ಎದುರು ತಾನೇನು ಮಾಡಿಲ್ಲ ಎಂದು ಹೇಳುತ್ತಿರುವುದಾದರೂ, ತನಿಖೆಯಲ್ಲಿ ದರ್ಶನ್‌ ಹಲ್ಲೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಲಭ್ಯವಾಗಿದೆ. ಸಾಕ್ಷ್ಯಗಳನ್ನು ಮುಂದಿಟ್ಟು ಪ್ರಶ್ನೆ ಕೇಳಿದರೆ ಆಗ ಸೈಲೆಂಟ್‌ ಆಗುತ್ತಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಕೊಲೆಗೈದ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದರೂ ಈ ಪ್ರಕರಣದಿಂದ ಪಾರಾಗಲು ದರ್ಶನ್‌ ಭಾರೀ ಪ್ಲ್ಯಾನ್‌ ಮಾಡಿದ ವಿಚಾರ ಪೊಲೀಸ್‌ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

Advertisement

Advertisement
Next Article