For the best experience, open
https://m.bcsuddi.com
on your mobile browser.
Advertisement

ಕೋವಿಡ್​ ಹಗರಣ: ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ- ಒಬ್ಬ ಅಧಿಕಾರಿ ಅಮಾನತು

10:16 AM Oct 08, 2024 IST | BC Suddi
ಕೋವಿಡ್​ ಹಗರಣ  ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ  ಒಬ್ಬ ಅಧಿಕಾರಿ ಅಮಾನತು
Advertisement

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ಹಗರಣ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ‌ ಸಲಹೆಗಾರ ಮತ್ತು ಇಲಾಖೆಯ ಜಂಟಿ ನಿಯಂತ್ರಕರೂ ಆಗಿದ್ದ ರಘು ಜಿ.ಪಿ ಎಂಬುವವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅನ್ನು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್​ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿತ್ತು.

ಇದರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ವಿರುದ್ಧ ಅಕ್ರಮ ನಡೆಸಿರುವ ಆರೋಪ ಮಾಡಲಾಗಿತ್ತು. ವೆಂಟಿಲೇಟರ್‌, ನಿರ್ವಹಣೆ ಲೋಪ, ಆಕ್ಸಿಜನ್‌ ಉಪಕರಣಗಳ ಖರೀದಿ, ಕೋವಿಡ್‌-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್‌ ಆಂಟಿಜೆನ್‌ ಟೆಸ್ಟ್‌ ಕಿಟ್‌ಗಳ ಖದೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲಾಗಿತ್ತು. ಇದೀಗ ಸರ್ಕಾರ ಅಧಿಕಾರಿಯನ್ನು ಅಮಾನತುಗೊಳಿಸಿದೆ.

Advertisement

Author Image

Advertisement