For the best experience, open
https://m.bcsuddi.com
on your mobile browser.
Advertisement

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತ.!

07:43 AM Nov 25, 2023 IST | Bcsuddi
ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತ
Advertisement

ಧಾರವಾಡ:  ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ  ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ.

ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟಿದ್ದಾನೆ. ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

Advertisement

ಕ್ಯಾಚ್ ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ ತಗುಲಿ ಶ್ರೇಯಸ್ ಅಸ್ವಸ್ಥಗೊಂಡಿದ್ದ. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಶ್ರೇಯಸ್ ಜೊತೆಗಿದ್ದ ಗೆಳೆಯನಿಗೂ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Tags :
Author Image

Advertisement