ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕ್ರಿಕೆಟ್‌ ಮ್ಯಾಚ್‌ ಆಡುತ್ತಿದ್ದ ಯುವಕನಿಗೆ ಹೃದಯಘಾತ, ಸಾವು

02:31 PM Jan 10, 2024 IST | Bcsuddi
Advertisement

ನೋಯ್ಡಾ: ಇತ್ತಿಚೇಗೆ ಪ್ರತಿದಿನ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ವರದಿಗಳು ಕೇಳಿ ಬರುತ್ತಿದೆ. ನೋಯ್ಡಾದಲ್ಲೂ ಹೃದಯಘಾತ ಪ್ರಕರಣ ಬೆಳಕಿಗೆ ಬಂದಿದೆ.

Advertisement

ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ರನ್‌ ತೆಗೆಯಲು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರು ಆದರೆ ಅಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದರು ಎನ್ನಲಾಗಿದೆ.

ಈ ಘಟನೆ ಥಾನಾ ಎಕ್ಸ್ಪ್ರೆಸ್ವೇ ಪ್ರದೇಶದ ಸೆಕ್ಟರ್ -135 ರಲ್ಲಿ ನಡೆದಿದೆ. ಕ್ರೀಡಾಂಗಣದಲ್ಲಿ ಶನಿವಾರ ಕೆಲವು ಮಂದಿ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಉತ್ತರಾಖಂಡ ಮೂಲದ 36 ವರ್ಷದ ವಿಕಾಸ್ ನೇಗಿ ಬ್ಯಾಟಿಂಗ್‌ ಮಾಡುತ್ತಿದ್ದರು. ಆಟದ ವೇಳೆ ವಿಕಾಸ್ ರನ್ ತೆಗೆದುಕೊಳ್ಳಲುಓಡುತ್ತಿರುವಾಗ ಹೃದಯಾಘಾತಕ್ಕೆ ಒಳಗಾಗಿ ಪಿಚ್ನಲ್ಲೇ ಕುಸಿದು ಬಿದ್ದಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Advertisement
Next Article