For the best experience, open
https://m.bcsuddi.com
on your mobile browser.
Advertisement

ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿದ್ರೆ ಸಿಗುವ ಪ್ರಯೋಜನಗಳೇನು ಗೊತ್ತಾ..?

09:00 AM May 30, 2024 IST | Bcsuddi
ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿದ್ರೆ ಸಿಗುವ ಪ್ರಯೋಜನಗಳೇನು ಗೊತ್ತಾ
Advertisement

ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಬೇಕಾದ ಹಲವು ಪ್ರಯೋಜನಗಳನ್ನು ಪಡೆಯಬಹುದು. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಇರುವುದರ ಜೊತೆಗೆ, ಕ್ಯಾಲ್ಸಿಯಂನಂತಹ ಅಂಶಗಳು ಕೂಡ ಕಂಡು ಬರುತ್ತವೆ.

ಇದು ದೇಹವನ್ನು ರೋಗಗಳಿಂದ ದೂರವಿಡುವುದರ ಜೊತೆಗೆ, ಮೂಳೆಗಳನ್ನು ಬಲಪಡಿಸುತ್ತದೆ. ಅದರಲ್ಲೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಹೊಟ್ಟೆಯ ಸಮಸ್ಯೆಗಳು ದೂರವಾಗುತ್ತವೆ. ಆಯುರ್ವೇದದಲ್ಲೂ ನೆಲ್ಲಿಕಾಯಿಯ ಬಗ್ಗೆ ಉಲ್ಲೇಖವಿದ್ದು, ಇದನ್ನು ಈ ಹಿಂದಿನಿಂದಲೂ ಔಷಧಿಯಾಗಿ ಬಳಸಲಾಗುತ್ತದೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹಾಗೂ ವಿಟಮಿನ್ ಎ, ಬಿ, ಪೊಟ್ಯಾಶಿಯಂ, ಕ್ಯಾಲ್ಸಿಯಂ, ಮೆಗ್ನೀಶಿಯಂ, ಕಬ್ಬಿಣ, ಕಾರ್ಬೋಹೈಡ್ರೇಟ್, ಅ್ಯಂಟಿ ಆಕ್ಸಿಡೆಂಟ್ ಮತ್ತು ಫೈಬರ್ ಅಂಶವಿದ್ದು, ಇದು ದೇಹವನ್ನು ಹಲವು ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಹಾಗೆಯೇ ಇದರಲ್ಲಿರುವ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇಷ್ಟೇ ಅಲ್ಲದೆ ಇದು ಚರ್ಮ ಮತ್ತು ಕೂದಲಿಗೆ ತುಂಬಾ ಉಪಯುಕ್ತ. ಜೊತೆಗೆ ನೆಲ್ಲಿಕಾಯಿಯ ಸೇವನೆಯಿಂದ ರಕ್ತಹೀನತೆಯ ಸಮಸ್ಯೆಯನ್ನು ಸಹ ದೂರ ಮಾಡಬಹುದು.

Advertisement

ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಸಿಗುವ ಪ್ರಯೋಜನಗಳು:

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸವನ್ನು ಬಿಸಿ ನೀರಿನೊಂದಿಗೆ ಕುಡಿಯುವುದರಿಂದ ತೂಕ ನಿಯಂತ್ರಣದಲ್ಲಿರುತ್ತದೆ. ಹೀಗೆ ಪ್ರತಿನಿತ್ಯ ಕುಡಿಯುವುದರಿಂದ ದೇಹ ನಿರ್ವಿಷವಾಗುತ್ತದೆ. ಇದರಿಂದ ಹೆಚ್ಚುವರಿ ಕೊಬ್ಬು ದೇಹದಲ್ಲಿ ಸಂಗ್ರಹವಾಗುವುದಿಲ್ಲ. ಈ ಮೂಲಕ ನಿಮ್ಮ ದೇಹ ತೂಕವನ್ನು ನಿಯಂತ್ರಣದಲ್ಲಿಡಬಹುದು ಜೊತೆ ಬೊಜ್ಜಿನ ಸಮಸ್ಯೆಯಿಂದ ಪಾರಾಗಬಹುದು.

ರೋಗ ನಿರೋಧಕ ಶಕ್ತಿ ಹೆಚ್ಚಳ:

ದೇಹದ ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ನೆಲ್ಲಿಕಾಯಿ ಜ್ಯೂಸ್ ಸಹಕಾರಿ. ಪ್ರತಿನಿತ್ಯ ಈ ಜ್ಯೂಸ್ ಅನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿಯಿಂದ ಬಲಗೊಳ್ಳುತ್ತದೆ. ಇದರಿಂದ ಅನೇಕ ರೀತಿಯ ವೈರಲ್ ರೋಗಗಳಿಂದ ಪಾರಾಗಬಹುದು. ಹೀಗಾಗಿ ದೇಹವನ್ನು ಆರೋಗ್ಯವಾಗಿಡಲು ನೆಲ್ಲಿಕಾಯಿ ಜ್ಯೂಸ್ ಕುಡಿಯಿರಿ.

ಅಸಿಡಿಟಿಗೆ ಪರಿಹಾರ:ನೆಲ್ಲಿಕಾಯಿ ರಸವನ್ನು ಸೇವಿಸುವುದರಿಂದ ಅಸಿಡಿಟಿ ಸಮಸ್ಯೆಯಿಂದ ಪರಿಹಾರ ಸಿಗುತ್ತದೆ. ಹೊಟ್ಟೆ ಮತ್ತು ಎದೆ ಉರಿ ಸಮಸ್ಯೆ ಇರುವವರು ಖಂಡಿತವಾಗಿಯೂ ನೆಲ್ಲಿಕಾಯಿ ರಸವನ್ನು ಸೇವಿಸಬೇಕು. ಹಾಗೆಯೇ ಗ್ಯಾಸ್ ಸಮಸ್ಯೆಯಿಂದ ಬಳಲುತ್ತಿರುವರು ಕೂಡ ನೆಲ್ಲಿಕಾಯಿ ಜ್ಯೂಸ್ ಕುಡಿಯುವ ಮೂಲಕ ಪರಿಹಾರ ಕಂಡುಕೊಳ್ಳಬಹುದು. ದಿನಕ್ಕೆ ಎರಡು ಬಾರಿ ನೆಲ್ಲಿಕಾಯಿ ಜ್ಯೂಸ್ ಸೇವಿಸುವುದು ಹೊಟ್ಟೆಗೂ ಮತ್ತು ಆರೋಗ್ಯಕ್ಕೂ ಒಳ್ಳೆದು.

ಕಣ್ಣಿನ ಆರೋಗ್ಯ ಹೆಚ್ಚಳ: ನೆಲ್ಲಿಕಾಯಿ ಜ್ಯೂಸ್ ಕುಡಿಯವುದರಿಂದ ಕಣ್ಣುಗಳ ಆರೋಗ್ಯ ಸುಧಾರಿಸುತ್ತದೆ . ಅಲ್ಲದೆ ಕಣ್ಣುಗಳ ದೃಷ್ಟಿ ಹೆಚ್ಚಿಸುವಲ್ಲಿ ಸಹಾಯಕ. ಇದರ ರಸವನ್ನು ಸೇವಿಸುವುದರಿಂದ ಕಣ್ಣು ತುರಿಕೆ ಮತ್ತು ಕಣ್ಣಲ್ಲಿ ನೀರು ಬರುವ ಸಮಸ್ಯೆಯನ್ನು ದೂರ ಮಾಡಬಹುದು.

ಮಧುಮೇಹದ ನಿಯಂತ್ರಣ:ನೆಲ್ಲಿಕಾಯಿಯಲ್ಲಿ ಕ್ರೋಮಿಯಂ ಎಂಬ ಅಂಶಗಳು ಇರುತ್ತವೆ. ಇದು ಇನ್ಸುಲಿನ್ ಹಾರ್ಮೋನುಗಳನ್ನು ಬಲಪಡಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ. ಹೀಗಾಗಿ ಮಧುಮೇಹದ ಸಮಸ್ಯೆ ಇರುವವರು ನೆಲ್ಲಿಕಾಯಿ ಜ್ಯೂಸ್ ಸೇವಿಸಿ ಅನಾರೋಗ್ಯದ ಅಪಾಯವನ್ನು ಕಡಿಮೆ ಮಾಡಬಹುದು.

ಮೂಳೆಗಳನ್ನು ಬಲಪಡಿಸುತ್ತದೆ: ನೆಲ್ಲಿಕಾಯಿ ರಸವನ್ನು ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಈ ಕಾಯಿಯಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದ್ದು, ಇದರ ರಸವನ್ನು ಸೇವಿಸುವುದರಿಂದ ಆಸ್ಟಿಯೊಪೊರೋಸಿಸ್, ಸಂಧಿವಾತ ಮತ್ತು ಕೀಲು ನೋವಿನಿಂದಲೂ ಪರಿಹಾರ ಕಾಣಬಹುದಾಗಿದೆ.

Author Image

Advertisement