ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಖಾಸಗಿ ಆಸ್ಪತ್ರೆಗಳ ಹೊರಗೆ ದರ ಪಟ್ಟಿ ಕಡ್ಡಾಯ' - ದಿನೇಶ್ ಗುಂಡೂರಾವ್

03:34 PM Feb 22, 2024 IST | Bcsuddi
Advertisement

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Advertisement

ಈ ಕುರಿತು ಮಾಹಿತಿ ನೀಡಿರುವ ಅವರು, ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯವಾಗಿದ್ದು, ದರ ಪಟ್ಟಿ ಪ್ರಕಟಿಸದ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಆಲೋಚಿಸಲಾಗುವುದು ಎಂದರು.

ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ಅನೇಕ ದೂರುಗಳು ಸಲ್ಲಿಕೆಯಾದ ಬೆನ್ನಲ್ಲೇ ಆರೋಗ್ಯ ಸಚಿವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Advertisement
Next Article