ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗಣರಾಜ್ಯೋತ್ಸವದ ಸಮಾರಂಭದಲ್ಲಿ ಭದ್ರತಾ ಲೋಪ -ಸಿಎಂ ಏಕಾಏಕಿ ನುಗ್ಗಿದ ವ್ಯಕ್ತಿ ಪೊಲೀಸರ ವಶಕ್ಕೆ.

02:11 PM Jan 26, 2024 IST | Bcsuddi
Advertisement

ಬೆಂಗಳೂರು: ಬೆಂಗಳೂರಿನಲ್ಲಿ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಕರಪತ್ರ ಹಿಡಿದು ಒಳನುಗ್ಗಲು ಯತ್ನಿಸಿದ ಪ್ರಸಂಗ ನಡೆದಿದೆ.

Advertisement

ಮೈಸೂರು ಮೂಲದ ಪರಶುರಾಮ್​ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಕೆಪಿಎಸ್'ಸಿ ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಕೆಪಿಎಸ್'ಸಿ ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ನುಗ್ಗಲು ಯತ್ನಿಸಿದ್ದಾರೆ. ಇವರನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.

Advertisement
Next Article