ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ : ಮೂವರು ಆಸ್ಪತ್ರೆಗೆ ದಾಖಲು...!!

09:03 AM Mar 19, 2024 IST | Bcsuddi
Advertisement
ಬೆಂಗಳೂರು : ಜನಪ್ರಿಯ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರಿಗೆ ಅಪಘಾತವಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ರಂಗಾರೆಡ್ಡಿ ಜಿಲ್ಲೆಯ ನಂದಿಗಮ ಮಂಡಲದ ಕನ್ಹಾ ಶಾಂತಿ ವನಂನಲ್ಲಿ ನಡೆದ ವಿಶ್ವ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಅಲ್ಲಿ ಕಾರ್ಯಕ್ರಮ ಮುಗಿಸಿ ಶನಿವಾರ ರಾತ್ರಿ ಹೈದರಾಬಾದ್-ಬೆಂಗಳೂರು ಹೆದ್ದಾರಿ ಮೂಲಕ ಮನೆಗೆ ತೆರಳಿದರು.
ಶಂಶಾಬಾದ್ ಮಂಡಲದ ತೊಂಡುಪಲ್ಲಿ ಸೇತುವೆ ಬಳಿ ಬಂದಾಗ ವೇಗವಾಗಿ ಬಂದ ಕಾರೊಂದು ಮಂಗ್ಲಿ ಅವರ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕಾರಿನಲ್ಲಿ ಮಂಗ್ನಿ, ಮೇಘರಾಜ್, ಮನೋಹರ್ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ಟಿವಿ ನಿರೂಪಕಿಯಾಗಿ ವೃತ್ತಿ ಆರಂಭಿಸಿದ ಮಂಗ್ಲಿ, ತೆಲುಗಿನ ಜನಪದ, ಸಿನಿಮಾ ಗಾಯಕಿ ಮಂಗ್ಲಿಗೆ ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಕನ್ನಡದ ‘ಕಣ್ಣು ಹೊಡೆಯಾಕ’ ಹಾಡಿನಿಂದ ರಾತ್ರೋ ರಾತ್ರಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು ಮಂಗ್ಲಿ. ಆ ಹಾಡಿನ ಬಳಿಕ ಕೆಲವಾರು ಹಾಡುಗಳನ್ನು ಕನ್ನಡದಲ್ಲಿ ಮಂಗ್ಲಿ ಹಾಡಿದ್ದಾರೆ.
Advertisement
Advertisement
Next Article