ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು
ಚಿತ್ರದುರ್ಗ: ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಸಲಹೆಗಳನ್ನು ಪಾಲನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಗುಡುಗು ಮತ್ತು ಸಿಡಿಲು ಸಂದಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳು: ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು ಕಾಮನ್ ಅಲಟಿರ್ಂಗ್ ಪೆÇ್ರೀಟೋಕಾಲ್ (ಸಿ.ಎ.ಪಿ) ಮುಖಾಂತರ ಬರುವ ಮೆಸೇಜ್‍ಗಳನ್ನು ಮೊಬೈಲ್‍ನಲ್ಲಿ ಗಮನಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಹಾಗೂ ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು.
ಗುಡುಗು, ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯಬೇಕು.
ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು.
ವಿದ್ಯುತ್ ಅಥವಾ ಟೆಲಿಫೆÇೀನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ. ಅರಣ್ಯ ಪುದೇಶದಲ್ಲಿದ್ದರೆ ಸಣ್ಣ ಮತ್ತು ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯಬೇಕು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೆÇೀನ್‍ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು. ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಯಾವುದೇ ಅವಶೇಷಗಳನ್ನು ತೆಗೆದುಹಾಕಬೇಕು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು. ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು, ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು. ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರಬೇಕು. ಅರಣ್ಯ, ಪುದೇಶದಿಂದ ಗಿಡ-ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಬೇಕು ಹಾಗೂ ಮಿಂಚಿನ ಹೊಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಯಿರುತ್ತದೆ. ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಿನ ಚಕ್ರಗಳು ಸುರಕ್ಷಿತವಲ್ಲದ ಕಾರಣ ಅವುಗಳಿಂದ ದೂರವಿರುವುದು. ಬಾಗಿಲುಗಳು, ಕಿಟಕಿಗಳು, ಮಂಟಪಗಳು, ಕಾಂಕ್ರಿಟ್ ನೆಲ, ಬೆಂಕಿಯ ಸ್ಥಳಗಳು, ಸ್ಟವ್‍ಗಳು, ಬಾತ್‍ಟಬ್‍ಗಳು ಅಥವಾ ಇತರೆ ವಿದ್ಯುತ್ ಉಪಕರಣಗಳಿಂದ ದೂರವಿರುವುದು.
ಸಿಡಿಲು, ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನ: ಸಿಡಿಲು, ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112/108 ಸಹಾಯವಾಣಿಗೆ ಕರೆ ಮಾಡಬೇಕು. ವೈದ್ಯಕೀಯ ಸಿಬ್ಬಂದಿಯು ಆಗಮಿಸುವ ಮುನ್ನವೇ ಅಗತ್ಯ ಪ್ರಥಮ ಚಿಕಿತ್ಸೆಯಿಂದ ಸಿಡಿಲು, ಮಿಂಚಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಜೀವವನ್ನು ಉಳಿಸಬಹುದಾಗಿದೆ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು ಸಂಚಾರವಾಗುವುದಿಲ್ಲ. ಆದ್ದರಿಂದ ಸಿಡಿಲಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿರುವುದಿಲ್ಲ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಮತ್ತು ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಬಹುದು.
ವ್ಯಕ್ತಿಯಲ್ಲಿ ಉಸಿರಾಟವು ಕಂಡು ಬರದಿದ್ದಲ್ಲಿ ತಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆಯ್ನು ಪ್ರಾರಂಭಿಸಬೇಕು. ವ್ಯಕ್ತಿಯಲ್ಲಿ ಎದೆಬಡಿತವು ಕಂಡು ಬರದಿದ್ದಲ್ಲಿ ತಕ್ಷಣವೇ cardiac compression ಹಾಗೂ Cardiopulmonary Resuscition ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ಕಣ್ಣಿನ ದೃಷ್ಠಿ, ಕಿವಿ ಕೇಳಿಸುವಿಕೆ ಹಾಗೂ ಮೂಲೆಗಳ ಮುರಿದಿವೆಯೇ ಎಂದು ಪರೀಕ್ಷಿಸಬೇಕು. ಇದರಿಂದ ಪಾಶ್ರ್ವವಾಯು, ಲಕ್ವಾ ಹೊಡೆಯುವುದನ್ನು ಮತ್ತು ಅಧಿಕ ರಕ್ತಸ್ರಾವದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಬಹುದು. ಸಿಡಿಲು ಬಡಿಯುವ ಸಾಧ್ಯತೆಯು ಮುಂದುವರೆಯುವುದರ ಬಗ್ಗೆ ಈಗಾಗಲೇ ಸಿಡಿಲಿನ ಹೊಡೆತಕ್ಕೆ ಒಳಗಾಗಿರುವ ವ್ಯಕ್ತಿ ಹಾಗೂ ಅವರನ್ನು ರಕ್ಷಿಸುವವರು ಎಚ್ಚರವಹಿಸಬೇಕು. ಸಿಡಿಲಿನ ಹೊಡತಕ್ಕೆ ಒಳಗಾದ ವ್ಯಕ್ತಿಯು ಅಪಾಯಕಾರಿ ಸ್ಥಳದಲ್ಲಿದ್ದರೆ ತಕ್ಷಣವೇ ಅವನನ್ನು, ಅವಳನ್ನು ಸೂಕ್ತ ರಕ್ಷಣಾ ಸ್ಥಳಕ್ಕೆ ಸ್ಥಳಾಂತರಿಸಬೇಕು. ಸಿಡಿಲಿನ ಹೊಡತಕ್ಕೆ ಒಳಗಾದ ವ್ಯಕ್ತಿಯು ವಿವಿಧ ರೀತಿಯ ಸುಟ್ಟುಗಾಯಗಳಿಂದ ಬಳಲಬಹುದು ಹಾಗೂ ಕಾಣದ ಗಾಯಗಳು, ಅಘಾತಕ್ಕೆ ಒಳಗಾಗಿರಬಹುದು. ಆದ್ದರಿಂದ ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳಿದ್ದಲ್ಲಿ ಸೂಕ್ತ ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕಳುಹಿಸಬೇಕು. ಸಿಡಿಲು ಬಡಿದಿರುವ ವ್ಯಕ್ತಿಯಿರುವ ಸ್ಥಳಕ್ಕೆ ತಲುಪಲು ಹಾಗೂ ಸಿಡಿಲು ಬಡಿತಕ್ಕೆ ಒಳಗಾದ ವ್ಯಕ್ತಿಯ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ನೀಡಬೇಕು. ಮತ್ತು ಸಿಡಿಲಿನ ಹೊಡತಕ್ಕೆ ಒಳಗಾದ ವ್ಯಕ್ತಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.