ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗೃಹಲಕ್ಷ್ಮಿ ಪೆಂಡಿಂಗ್ ಹಣ ಜಮಾ.! ಈ ರೀತಿ ಸ್ಟೇಟಸ್ ಚೆಕ್ ಮಾಡಿ..!

03:35 PM Aug 21, 2024 IST | BC Suddi
Advertisement

ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಜೂನ್-2024 ತಿಂಗಳ ರೂ 2,000 ಹಣವನ್ನು(Gruhalakshmi april amount) ಬಿಡುಗಡೆ ಮಾಡಲಾಗಿದೆ. ಈ ತಿಂಗಳ ಒಳಗೆ ಈ ಹಣ ಪ್ರತಿಯೊಬ್ಬರ ಖಾತೆಗೂ ತಲುಪಲಿದೆ. ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Advertisement

ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ವೋ ಎಂದು ಚೆಕ್ ಮಾಡಿಕೊಳ್ಳಲು ನಿಮ್ಮ ಬ್ಯಾಂಕಿಗೆ ಹೋಗಿ ಪಾಸ್ ಬುಕ್ ಅಪ್ಡೇಟ್ ಮಾಡಿಸಿ ಅಥವಾ DBT Karnataka ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಸರ್ಕಾರದಿಂದ ಬಿಡುಗಡೆಯಾಗುವ ಎಲ್ಲಾ DBT ಸ್ಟೇಟಸ್ ತಿಳಿದುಕೊಳ್ಳಿ.

ಈಗಾಗಲೇ ಜುಲೈ ತಿಂಗಳ ಗೃಹಲಕ್ಷ್ಮಿ ಹಣ 26.65 ಲಕ್ಷ ರೂಪಾಯಿ ವರ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ವರ್ಗಾವಣೆ ಆಗುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಕೆಲವು ತಾಂತ್ರಿಕ ದೋಷಗಳಿಂದ 11 ಮತ್ತು 12ನೇ ಕಂತಿನ ಹಣ ಜಮೆ ಆಗಿಲ್ಲ , ಈಗ ಎಲ್ಲಾ ಸರಿಯಾಗಿದ್ದು ಒಟ್ಟು ನಾಲ್ಕು ಸಾವಿರ ರೂಪಾಯಿ ಪೆಂಡಿಂಗ್ ಹಣ ಬಿಡುಗಡೆ ಆಗುತ್ತಿದೆ.

ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ ! ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡಿಕೊಳ್ಳುವ ಮೂಲಕ ಗೃಹಲಕ್ಷ್ಮಿ ಹಣದ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು ಅಥವಾ DBT Karnataka App:‌ Download ಮಾಡಿ ಡಿ ಬಿ ಟಿ ಆಪ್ಲಿಕೇಶನ್ ಮೂಲಕ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಜಮಾ ಆಗಿರುವ ಎಲ್ಲಾ ಹಣದ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಬಹುದು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article