ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ತಲುಪಲು ಇಲಾಖೆ ವತಿಯಿಂದ ಶಿಬಿರ- ಪ್ರಿಯಾಂಕ್ ಖರ್ಗೆ

05:27 PM Dec 28, 2023 IST | Bcsuddi
Advertisement

ಕಲಬುರಗಿ: ಗೃಹಲಕ್ಷ್ಮಿ ಯೋಜನೆಯ ಲಾಭ ಎಲ್ಲಾ ಫಲಾನುಭವಿಗಳಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Advertisement

ಈ ಕುರಿತು ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ ಎಂದು ತಿಳಿಸಿದ್ದಾರೆ.

ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಏಕಕಾಲದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೇಟ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ. ಈ ಅಭಿಯಾನದ ಸಂಪೂರ್ಣ ಪ್ರಯೋಜನ ಪಡೆಯಬೇಕೆಂದು ಸಾರ್ವಜನಿಕರು ಮನವಿ ಮಾಡಿದರು.

Advertisement
Next Article