ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

08:06 AM Jul 17, 2024 IST | Bcsuddi
Advertisement

 

Advertisement

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ  ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ ಪಡೆಯಬಹುದಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮೀ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್‍ಜೆಂಡರ್ ಪರ್ಸನ್ (NATIONAL PORTAL FOR TRANS GENDER PERSON)  ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರ ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.

ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ, ಪಾಸ್‍ಪೋರ್ಟ್ ಸೈಜ್ ಪೋಟೊ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ನೀಡಬೇಕಾಗಿರುತ್ತದೆ.

 

Tags :
ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ
Advertisement
Next Article