For the best experience, open
https://m.bcsuddi.com
on your mobile browser.
Advertisement

ಗೋಬಿ ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ..!

09:43 AM Jun 25, 2024 IST | Bcsuddi
ಗೋಬಿ ಮಂಚೂರಿ  ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ
Advertisement

ಬೆಂಗಳೂರು : ರಾಜ್ಯಾದ್ಯಂತ ವೆಜ್‌ ಕಬಾಬ್‌, ಕೋಳಿ ಹಾಗೂ ಮೀನಿನ ಕಬಾಬ್‌ ತಯಾರಿಗೆ ಕೃತಕ ಬಣ್ಣ ಉಪಯೋಗಿಸುವುದನ್ನು ನಿಷೇಧಿಸಿ ರಾಜ್ಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ ಜೀವಾವಧಿವರೆಗೆ ಜೈಲು ಶಿಕ್ಷೆಯ ಎಚ್ಚರಿಕೆಯನ್ನೂ ನೀಡಲಾಗಿದೆ. ಚಿಕನ್ ಕಬಾಬ್‌ಗಳಲ್ಲಿ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ, ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ 38 ಕಬಾಬ್‌ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದರು. ಈ ಪೈಕಿ 8 ಕಬಾಬ್‌ ಮಾದರಿಗಳು ಕೃತಕ ಬಣ್ಣಗಳಿಂದ ಕೂಡಿರುವುದು ಪತ್ತೆಯಾಗಿದೆ. ಆಹಾರ ಸುರಕ್ಷೆ ಹಾಗೂ ಗುಣಮಟ್ಟದ ಕಾಯ್ದೆ 2011ರ ಅನ್ವಯ ಕಬಾಬ್‌ ತಯಾರಿಯಲ್ಲಿ ಯಾವುದೇ ಕೃತಕ ಬಣ್ಣವನ್ನು ಉಪಯೋಗಿಸುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿ ಬಣ್ಣಗಳ ಬಳಕೆ ಮಾಡಿದ್ದಲ್ಲಿ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಕಾಯ್ದೆ ಪ್ರಕಾರ ಕನಿಷ್ಠ 7 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

Author Image

Advertisement